ಡಿಕೆ ಶಿವಕುಮಾರ್ ಮನೆಯಲ್ಲಿ ಯೋಗೇಶ್ವರ್ ಪ್ರತ್ಯಕ್ಷ: JDS-BJP ದೋಸ್ತಿಗೆ ಚೆಕ್ ಮೇಟ್; ಕೆಲ ಹೊತ್ತಿನಲ್ಲಿ ಕಾಂಗ್ರೆಸ್ ಸೇರ್ಪಡೆ?

ಯೋಗೇಶ್ವರ್ ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿಸಿರುವುದು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಂತಾಗಿದೆ. ಆ ಮೂಲಕ, ಯೋಗೇಶ್ವರ್ ಅವರು ಬಿಜೆಪಿ ಬಿಟ್ಟು 'ಕೈ' ಹಿಡಿಯುವುದು ಖಚಿತವಾಗಿದೆ.
CP Yogeeshwar meet congress leaders
ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಸಿ ಪಿ ಯೋಗೇಶ್ವರ್
Updated on: 

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲು ಬಯಸಿದ್ದ ಸಿ ಪಿ ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರುವುದು ಬಹುತೇಕ ಫಿಕ್ಸ್ ಆಗಿದೆ.

ಸಿ.ಪಿ‌. ಯೋಗೇಶ್ವರ್ ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿಸಿರುವುದು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಂತಾಗಿದೆ. ಆ ಮೂಲಕ, ಯೋಗೇಶ್ವರ್ ಅವರು ಬಿಜೆಪಿ ಬಿಟ್ಟು 'ಕೈ' ಹಿಡಿಯುವುದು ಖಚಿತವಾಗಿದೆ. ಕೆಲವೇ ಹೊತ್ತಿನಲ್ಲಿ ಸಿಪಿವೈ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಜತೆ ಸಿಎಂ ಸಿದ್ದರಾಮಯ್ಯ ಅವರನ್ನು "ಕಾವೇರಿ"ಯಲ್ಲಿ ಬುಧವಾರ ಭೇಟಿ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕ ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.

CP Yogeeshwar meet congress leaders
ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್: ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com