ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಯಾಸಿರ್ ಅಹ್ಮದ್ ಖಾನ್ ಕಣಕ್ಕೆ

ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಯಾಸಿರ್ ಅಹ್ಮದ್ ಖಾನ್
ಯಾಸಿರ್ ಅಹ್ಮದ್ ಖಾನ್
Updated on

ನವದೆಹಲಿ: ಕೊನೆಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಗುರುವಾರ ಘೋಷಿಸಿದೆ.

ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಇಂದು ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರಿಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಯಾಸಿರ್ ಅಹ್ಮದ್ ಖಾನ್
ಶಿಗ್ಗಾಂವಿ ಉಪಚುನಾವಣೆ: ಗೆಲುವಿಗೆ ಕಾಂಗ್ರೆಸ್​ ಕಸರತ್ತು, ಪೈಪೋಟಿ ನೀಡಲು BJP ಸಿದ್ಧತೆ

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com