
ಹಾವೇರಿ: ನವೆಂಬರ್ 13 ರಂದು ನಡೆಯಲಿರುವ ಶಿಗ್ಗಾಂವಿ ಉಪಚುನಾವಣೆಗೆ ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಸಮಧಾನ ಭುಗಿಲೆದ್ದಿದೆ, ಹೀಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.
ಬಸವರಾಜ್ ಬೊಮ್ಮಾಯಿ ಅವರ ಆಪ್ತ ಹಾಗೂ ಟಿಕೆಟ್ ಆಕಾಂಕ್ಷಿ ಶ್ರೀಕಾಂತ್ ದುಂಡಿಗೌಡರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಶಿಗ್ಗಾಂವಿ ಕ್ಷೇತ್ರದಲ್ಲಿ ಇಂತಹ ಯಾವುದೇ ಬೆಳವಣಿಗೆಯಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, ಮುಂಬರುವ ಉಪಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲಾಗುವುದು ಎಂದು ಹೇಳಿದರು. ತಮ್ಮ ರಾಜಕೀಯ ಗುರು ಬಸವರಾಜ ಬೊಮ್ಮಾಯಿ ಅವರು ನನಗೆ ಅನ್ಯಾಯ ಮಾಡಿದರು. ಟಿಕೆಟ್ ಕೊಡಿಸುವುದಾಗಿ ಹೇಳುತ್ತ, ತಮ್ಮ ಮಗನಿಗೆ ಟಿಕೆಟ್ ಕೊಡಿಸಿದರು. ನನಗೆ ಹಾಗೂ ಕಾರ್ಯಕರ್ತರಿಗೆ ನೋವಾಗಿದೆ’ ಎಂದು ಹೇಳಿದ್ದಾರೆ. ನಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲು ಅಕ್ಟೋಬರ್ 24ರಂದು ಸಂಜೆ ಹಿರಿಯರು ಮತ್ತು ಹಿತೈಷಿಗಳ ಸಭೆ ಕರೆದಿರುವೆ. ಅವರ ಅಭಿಪ್ರಾಯ ಪಡೆದು ನನ್ನ ನಿರ್ಧಾರ ಪ್ರಕಟಿಸುವೆ ಎಂದು ಅವರು ತಿಳಿಸಿದರು
ಬೊಮ್ಮಾಯಿ ಕುಟುಂಬದ ಹೊರಗಿನ ಅಭ್ಯರ್ಥಿಗೆ ಅವಕಾಶವಿದೆ ಎಂದು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ನಂಬಿದ್ದರು. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಬದಲಿಗೆ ಪಕ್ಷವು ವಂಶ ರಾಜಕೀಯವನ್ನು ಆಯ್ಕೆ ಮಾಡಿದೆ ಎಂದು ಬಿಜೆಪಿ ನಾಯಕ ಹೇಳಿದರು. ಬಸವರಾಜ ಬೊಮ್ಮಾಯಿ ಅವರು, ಪಕ್ಷದ ಯಾವೊಬ್ಬ ಕಾರ್ಯಕರ್ತರಿಗೂ ಅನ್ಯಾಯ ಮಾಡಿಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂಥ ಬೆಳವಣಿಗೆಗಳು ಸಹಜ. ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ದಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸುವರು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು. ಬೊಮ್ಮಾಯಿ ಅವರು ದುಂಡಿಗೌಡರ ಜತೆ ಮಾತನಾಡಿ ಅವರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು. ನಾನು ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ದುಂಡಿಗೌಡರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂಬ ಊಹಾಪೋಹ ಹಬ್ಬಿದೆ.
Advertisement