ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ.
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುಮಾರು ಅರ್ಧಗಂಟೆ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು, ಬಿಜೆಪಿ ಅಭ್ಯರ್ಥಿ ಸೋಲಿಸಬೇಕು, ನೀನು ಪಕ್ಷದ ಪರ ಕೆಲಸ ಮಾಡು ಎಂದು ಮನವೊಲಿಸಿದ್ದು, ಮಾಜಿ ಶಾಸಕ ಅಜ್ಜಂಪೀರ್ ತಮ್ಮ ನಾಮಪತ್ರ ವಾಪಸ್ ಪಡೆಯುತ್ತಾರೆ ಎನ್ನಲಾಗಿದೆ. ಆದರೆ, ಮತ್ತೋರ್ವ ಬಂಡಾಯ ಅಭ್ಯರ್ಥಿ ಮಂಜುನಾಥ್ ಕುನ್ನೂರು ಅವರು ನಾಮಪತ್ರ ವಾಪಸ್ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
Advertisement