ಧಾರವಾಡ: ಸಂಡೂರು, ಶಿಗ್ಗಾಂವ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು.
ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಶೆಟ್ಟರ್, ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣಗಳನ್ನು ನೋಡಿದರೆ ಪ್ರತಿದಿನ ಕಾಂಗ್ರೆಸ್ ಸರ್ಕಾರ ವರ್ಚಸ್ಸು ಕುಸಿಯುತ್ತಿದೆ. ಸಿದ್ದರಾಮಯ್ಯ ಇಮೇಜ್ ಕೂಡ ಕುಸಿಯುತ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ವಿಶೇಷವೆಂದರೆ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ವಿರುದ್ಧ ಸ್ಪರ್ಧಿಸಿದ್ದಾರೆ.
ಈ ಮಧ್ಯೆ 18 ನೇ ಲೋಕಸಭೆಯ ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಗದೀಶ್ ಶೆಟ್ಟರ್ ಧನ್ಯವಾದ ಸಲ್ಲಿಸಿದ್ದಾರೆ.
Advertisement