
ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಪಕ್ಷವನ್ನು ಪುನಶ್ಚೇತನಗೊಳಿಸುವಂತೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಐಡಿಯಾ ಕೊಟ್ಟಿದ್ದೇ ನಾನು ಎಂದು ಮಾಜಿ ಸಚಿವ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೀಶ್ವರ್ ಅವರು ಶನಿವಾರ ಹೇಳಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯವರ ತಲೆಯಲ್ಲಿ ಬಿತ್ತಿದ್ದೇ ನಾನು ಎಂದು ಹೇಳಿದರು,
Advertisement