ಶಿಗ್ಗಾಂವಿ ಉಪಚುನಾವಣೆ: ನನ್ನನ್ನೇ ಅಭ್ಯರ್ಥಿ ಎಂದು ಭಾವಿಸಿ ನನ್ನ ಮಗನಿಗೆ ಮತ ನೀಡಿ- ಸಂಸದ ಬೊಮ್ಮಾಯಿ

ಬೊಮ್ಮಾಯಿಯವರು ನಿನ್ನೆಯಷ್ಟೇ ಹೊಸೂರು, ದುಂಡಸಿ, ಜಕನಕಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಪುತ್ರ ಭರತ್ ಪರ ಪ್ರಚಾರ ನಡೆಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಜನತೆ ನನ್ನನ್ನೇ ಅಭ್ಯರ್ಥಿ ಎಂದು ಭಾವಿಸಿ ನನ್ನ ಪುತ್ರ ಭರತ್ ಬೊಮ್ಮಾಯಿಗೆ ಮತ ನೀಡಬೇಕೆಂದು ಹಾವೇರಿ-ಗದಗ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಮನವಿ ಮಾಡಿದರು.

ಬೊಮ್ಮಾಯಿಯವರು ನಿನ್ನೆಯಷ್ಟೇ ಹೊಸೂರು, ದುಂಡಸಿ, ಜಕನಕಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಪುತ್ರ ಭರತ್ ಪರ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷದಲ್ಲಿ ಈ ತಾಲೂಕಿನ ಅಭಿವೃದ್ಧಿಯ ಚಿತ್ರಣ ಹೇಗೆ ಬದಲಾಗಿದೆ ಎನ್ನುವುದನ್ನು ತಾವೆಲ್ಲ ನೊಡಿದ್ದೀರಿ. ಅಭಿವೃದ್ಧಿ ನಿಂತ ನೀರಲ್ಲ ಅದು ನಿರಂತರವಾಗಿ ಮುಂದುವರೆಯಬೇಕು. ಹೀಗಾಗಿ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಪಚುನಾವಣೆಯಲ್ಲಿ ಶಿಗ್ಗಾಂವಿ ಜನತೆ ಭರತ್ ಪರ ನಿಲ್ಲುತ್ತಾರೆ: ಸಂಸದ ಬಸವರಾಜ ಬೊಮ್ಮಾಯಿ

ನಾನು ಈ ಬಾರಿ ಚುನಾವಣೆಯಲ್ಲಿ ನನ್ನ ಮಗನನ್ನು ನಿಲ್ಲಿಸಬಾರದು ಎಂದು ತೀರ್ಮಾನಿಸಿದ್ದೆ. ಹೈಕಮಾಂಡ್ ನೀವು ಇರಲೇಬೇಕು. ನಿಮ್ಮ ಮಗನಿಗೆ ಟಿಕೆಟ್ ಕೊಡುತ್ತೇವೆ. ನೀವು ಅಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ‌. ನಾನು ಈ ತಾಲೂಕನ್ನು ಎಂದಿಗೂ ಬಿಟ್ಟು ಹೋಗುವುದಿಲ್ಲ. ನಿಮ್ಮ ಪ್ರೀತಿಗೆ ಎಂದೂ ಬೆಲೆ ಕಟ್ಟಲಾಗುವುದಿಲ್ಲ. ಈ ಕ್ಷೇತ್ರದ ಅಭಿವೃದ್ಧಿ ಇನ್ನೂ ಆಗಬೇಕಿದೆ. ಭರತ್ ಬೊಮ್ಮಾಯಿ ಅಭಿವೃದ್ದಿ ಕಾರ್ಯ ಮುಂದುವರೆಸುತ್ತಾನೆ. ಭರತ್ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಪ್ರವಾಹ ಬಂದಾಗ ಕೇಂದ್ರ ಸರ್ಕಾರ ನೀಡಿದ್ದಕ್ಕಿಂತ ಎರಡು ಪಟ್ಟು ಬೆಳೆ ಪರಿಹಾರ ನೀಡಿದ್ದೇವೆ. ರಾಜ್ಯದಲ್ಲಿ ಸುಮಾರು ಏಳು ಸಾವಿರ ಕೋಟಿ ರೂ. ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದ ರೈತರಿಗೂ ಬಂದಿದೆ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ನಮ್ಮ ನಾಯಕರಾದ ಯಡಿಯೂರಪ್ಪ ಅವರ ನಿರ್ಧಾರದಂತೆ ಪ್ರತಿ ಮನೆಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದಲ್ಲಿ ಸುಮಾರು 18 ಸಾವಿರ ಮನೆಗಳ ನಿರ್ಮಾಣ ಮಾಡಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com