ಮೂರು ಕ್ಷೇತ್ರಗಳ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ: ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಹೇಳಿದರು.
HD Kumaraswamy
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುವುದಿಲ್ಲ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ NDA ಮೈತ್ರಿಕೂಟ ಮೂರು ಕ್ಷೇತ್ರಗಳನ್ನು ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬಹುದು ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ. ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.

HD Kumaraswamy
JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!

ಬಿಜೆಪಿ-ಜೆಡಿಎಸ್ ರಾಜ್ಯದ ಅಭಿವೃದ್ಧಿಗಾಗಿ ಒಟ್ಟಾಗಿವೆ. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ. ಬಿಜೆಪಿ ಜೆಡಿಎಸ್ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು ನಮ್ಮ ಉದ್ದೇಶ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ ಎನ್​ಡಿಎ ಅಭ್ಯರ್ಥಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com