ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ; ಟ್ರಸ್ಟ್‌ಗೆ ಉಚಿತವಾಗಿ 19 ಎಕರೆ ಸರ್ಕಾರಿ ಭೂಮಿ

ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ತ್ವಶಾಸ್ತ್ರದ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್‌ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ.
AICC President Mallikarjuna Kharge
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆonline desk
Updated on

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದ ಗಂಭೀರ ಆರೋಪ ಕೇಳಿಬಂದಿದ್ದು, ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಅವರು ಸೋಮವಾರ ಆರೋಪಿಸಿದ್ದಾರೆ.

ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ತ್ವಶಾಸ್ತ್ರದ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್‌ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಹೊಸ ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ ಕುರಿತು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಒತ್ತಾಯಿಸಿದ್ದಾರೆ.

ಅದರ ಟ್ರಸ್ಟಿಗಳಲ್ಲಿ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು ಪುತ್ರರು ಇದ್ದಾರೆ. ಖರ್ಗೆ ಅವರ ಅಳಿಯ ಹಾಗೂ ಹಾಲಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಪಾಲಿ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ ಎಂದು ಸಿರೋಯಾ ಹೇಳಿದ್ದಾರೆ.

AICC President Mallikarjuna Kharge
ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ

2014ರ ಮಾರ್ಚ್‌ನಲ್ಲಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 16 ಎಕರೆ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ಪಾಲಿ ಇನ್‌ಸ್ಟಿಟ್ಯೂಟ್‌ಗೆ ಲೀಸ್ ನೀಡಿತ್ತು. ನಂತರ ಒಂದೆರಡು ವರ್ಷಗಳಲ್ಲಿ 16 ಎಕರೆ ಲೀಸ್ ಆಸ್ತಿಗೆ 3 ಎಕರೆ ಹೆಚ್ಚುವರಿ ಜಮೀನು ಸೇರ್ಪಡೆಯಾಯಿತು ಮತ್ತು ಅಂತಿಮವಾಗಿ, ಮಾರ್ಚ್ 2017 ರಲ್ಲಿ ಎಲ್ಲಾ 19 ಎಕರೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಖರ್ಗೆ ಕುಟುಂಬ ನಡೆಸುವ ಸಂಸ್ಥೆಗೆ ಉಚಿತವಾಗಿ ವರ್ಗಾಯಿಸಿತು. ಒಂದು ಪ್ರಮುಖ ಸಂಗತಿಯೆಂದರೆ ಖರ್ಗೆಯವರ ಮಗ ಪ್ರಿಯಾಂಕ್ ಖರ್ಗೆ ಅವರು ಭೂಮಿ ಮಂಜೂರು ಮಾಡಿದಾಗ ಈಗಿನಂತೆ ಆಗಿನ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು ಎಂದು ಆರೋಪಿಸಿದ್ದಾರೆ.

5 ಎಕರೆ ಕೆಐಎಡಿಬಿ ಭೂ ಮಂಜೂರಾತಿಯಂತೆ 19 ಎಕರೆ ಭೂಮಿ ಹಸ್ತಾಂತರವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ನಾನು ಒತ್ತಾಯಿಸುತ್ತೇನೆ. ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತವನ್ನು ಎತ್ತಿ ತೋರಿಸಿದ್ದಕ್ಕಾಗಿ ನನ್ನನ್ನು ನಿಂದಿಸಲಾಗಿದೆ ಮತ್ತು ವೈಯಕ್ತಿಕವಾಗಿ ಗುರಿಪಡಿಸಲಾಗಿದೆ. ಆದರೆ, ಖರ್ಗೆ ಕುಟುಂಬವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗವಾನ್ ಗೌತಮರ ತತ್ವಗಳಲ್ಲಿ ನಂಬಿಕೆ ಹೊಂದಿದ್ದರೆ, ಅವರೇ ತನಿಖೆಗೆ ಒಳಗಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೇಳಬೇಕಾದ ಇನ್ನೊಂದು ಸೂಕ್ತ ಪ್ರಶ್ನೆಯೆಂದರೆ, ಖಾಸಗಿ ಟ್ರಸ್ಟ್‌ಗೆ ಭೂಮಿಯನ್ನು ಮಂಜೂರು ಮಾಡಲು ಸಿದ್ದರಾಮಯ್ಯ ಸರ್ಕಾರವು ಖರ್ಗೆಯವರ ಒತ್ತಡಕ್ಕೆ ಮಣಿದಿದೆಯೇ ಅಥವಾ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಖರ್ಗೆ ಅವರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆಯೇ? ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com