ಸಿಎಂ ಬದಲಾವಣೆಗೆ ಹೆಚ್ಚುತ್ತಿರುವ ಒತ್ತಡ: ಒಮ್ಮತದ ನಾಯಕನ ಆಯ್ಕೆಗೆ ಕಾಂಗ್ರೆಸ್ ಕಸರತ್ತು; ಯಾರು ಹಿತವರು ಈ ಮೂವರೊಳಗೆ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಕಿಹೊಳಿ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಬದಲಾಯಿಸುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸತೀಶ್ ಜಾರಕಿಹೊಳಿ
ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಯೋಜನೆ ರೂಪಿಸುತ್ತಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಪಕ್ಷದ ಒಂದು ವರ್ಗದ ಮುಖಂಡರು ಸಮ್ಮತಿ ಸೂಚಿಸಿದ್ದರೇ, ಮತ್ತೊಂದು ವರ್ಗವು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರಂತಹ ಜನಪ್ರಿಯ ಮತ್ತು ಕಿರಿಯ ನಾಯಕರತ್ತ ಒಲವು ತೋರುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಅವರಿಗೆ ಅವಕಾಶ ನೀಡಲು ಪಕ್ಷವು ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಊಹಾಪೋಹಗಳ ನಡುವೆ ಭಾನುವಾರ, ಸತೀಶ್ ಜಾರಕಿಹೊಳಿ ಕೇಂದ್ರ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ. ಸಿದ್ದರಾಮಯ್ಯನವರ ನಂತರ ದುಳಿದ ವರ್ಗಗಳ ಪ್ರಬಲ ನಾಯಕನಾಗಿ ಅವರ ಜನಪ್ರಿಯತೆ ಹಾಗೂ ಎಸ್ಸಿ ಎಸ್ ಟಿ ಸಮುದಾಯದ 15 ಶಾಸಕರು ಸೇರಿದಂತೆ 30 ಕ್ಕೂ ಹೆಚ್ಚು ಶಾಸಕರ ಬೆಂಬಲವು ಸತೀಶ್ ಜಾರಕಿಹೊಳಿ ಪರವಾಗಿದೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸತೀಶ್ ಜಾರಕಿಹೊಳಿ
ಖುರ್ಚಿ ಭದ್ರಪಡಿಸಿಕೊಳ್ಳಲು CM ಕಸರತ್ತು: ಸಚಿವರನ್ನು ಹಿಡಿದಿಟ್ಟುಕೊಳ್ಳಲು ಡಿನ್ನರ್ ಪಾರ್ಟಿ; MUDA ಹಗರಣದ ಗಮನ ಬೇರೆಡೆ ಸೆಳೆಯಲು ತಾಲೀಮು!

ಸಿದ್ದರಾಮಯ್ಯ ಅವರು ಸಮ್ಮತಿಸಿದರೆ ಸಿಎಂ ಹುದ್ದೆಗೆ ಸತೀಶ್ ಜಾರಕಿಹೊಳಿ ಅವರನ್ನು ಹೈಕಮಾಂಡ್ ಆಯ್ಕೆ ಮಾಡಬೇಕು ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಮೂವರು ಶಾಸಕರು, ಎಂಎಲ್ ಸಿ ಹಾಗೂ ಸಂಸದರನ್ನು ಹೊಂದಿರುವ ಜಾರಕಿಹೊಳಿ ಕುಟುಂಬದೊಂದಿಗೆ ಸಿದ್ದರಾಮಯ್ಯ ನಿಕಟ ಸಂಪರ್ಕ ಹೊಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಕಿಹೊಳಿ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಬದಲಾಯಿಸುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ,ಒಂದು ವೇಳೆ ಸಿಎಂ ಬದಲಾವಣೆ ಪರಿಸ್ಥಿತಿ ಬಂದಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ರಾಹುಲ್ ಗಾಂಧಿ ಸೇರಿದಂತೆ ಇತರ ಯಾವುದೇಕಾಂಗ್ರೆಸ್ ಉನ್ನತ ನಾಯಕರುಗಳಿಗೆ ಸ್ಪಷ್ಟತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೊಂದಿಗೆ ಪಕ್ಷದ ಉನ್ನತ ನಾಯಕರು ಕೂಡ ಚರ್ಚೆ ನಡೆಸಿದ್ದರು. ಆದರೆ ಅವರು ದಲಿತ ನಾಯಕರಾಗಿದ್ದರೂ ಖರ್ಗೆ ಅಥವಾ ಜಾರಕಿಹೊಳಿ ಅವರ ರೀತಿ ಸಿಎಂ ಸ್ಥಾನಕ್ಕೆ ಶಾಸಕರ ಬೆಂಬಲವನ್ನು ಪಡೆಯದಿರಬಹುದು. ಸಿಎಂ ಸ್ಥಾನವನ್ನು ಶಿವಕುಮಾರ್ ಅವರಿಗೆ ನೀಡಬೇಕೆ ಅಥವಾ ಹಿಂದುಳಿದ ವರ್ಗಗಳ ನಾಯಕನೊಂದಿಗೆ ಹೋಗಬೇಕೇ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ಜಿಜ್ಞಾಸೆಗೊಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com