2028ಕ್ಕೆ ನಾನು ಸಿಎಂ ಆಗುವೆ: ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಸಿಎಂ ಯಾರು ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೆ ಸತೀಶ್ ಜಾರಕಿಹೊಳಿ ಹೆಸರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡುತ್ತಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಕೈ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಪಕ್ಷದ ಹಿರಿಯರು ಹಾಗೂ ಅನುಭವಸ್ಥರ ನಡುವೆ ಪೈಪೋಟಿ ಶುರುವಾಗಿದೆ. ಎಂಬಿ.ಪಾಟೀಲ್, ಪರಮೇಶ್ವರ್ ಬಳಿಕ ಇದೀಗ ಸಿಎಂ ರೇಸ್ ನಲ್ಲಿ ಸತೀಶ್ ಜಾರಕಿಹೊಳಿಯವರ ಹೆಸರು ಕೂಡ ಕೇಳಿ ಬರುತ್ತಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಸಿಎಂ ಯಾರು ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೆ ಸತೀಶ್ ಜಾರಕಿಹೊಳಿ ಹೆಸರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಇದೇ ವೇಳೆ ಸತೀಶ್ ಜಾರಕಿಹೊಳಿಯವರು ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದು, ಸಿಎಂ ಕುರ್ಚಿ ಲಾಬಿ ಕುರಿತ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಈ ನಡುವ ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸತೀಶ್ ಜಾರಕಿಹೊಳಿಯವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕಾಗಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ. ಅನೇಕರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು. ನಾನು ಸಿಎಂ ಆಗುವ ವಿಚಾರದ ಬಗ್ಗೆ ಮುಂದೆ ನೋಡೋಣ. 2028ಕ್ಕೆ ಈ ವಿಚಾರದ ಬಗ್ಗೆ ನೋಡೋಣ ಎಂದು ಹೇಳಿದರು.

ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅಲ್ಲದೆ ಆರ್‌ವಿ ದೇಶಪಾಂಡೆ, ಪರಮೇಶ್ವರ್, ಡಿಕೆ ಶಿವಕುಮಾರ್, ಎಂಬಿ ಪಾಟೀಲ್, ಶಿವಾನಂದ ಪಾಟೀಲ್ ಹಿರಿಯರಿದ್ದಾರೆ. ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಹೀಗಾಗಿ ಸದ್ಯ ಈ ಪ್ರಶ್ನೆ ಉದ್ಬವಿಸಲ್ಲ. ಮುಂದೆ ನೋಡೋಣ ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ
ಸಿಎಂ ಕುರ್ಚಿ ಬಗ್ಗೆ ಬಹಿರಂಗ ಹೇಳಿಕೆ ನೀಡುವವರಿಗೆ ಕಡಿವಾಣ ಹಾಕಿ: ಖರ್ಗೆಗೆ ಕಾಂಗ್ರೆಸ್ MLC ಗಳ ಪತ್ರ!

ರಾಜ್ಯಪಾಲರು ತಮ್ಮ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದರೆ, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕಾನೂನಿನಲ್ಲಿ ಹೇಳಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪರ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆ ಇದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಸಿಎಂ ಅಧಿಕಾರದಿಂದ ಕೆಳಗಿಳಿಯಬೇಕೇ ಎಂಬ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ ಎನ್ನುವ ವಿಶ್ವಾಸವೂ ನನಗಿದೆ. ಈಗ ಸಿಎಂ ಆಗುವ ಕನಸು ಕಂಡಿಲ್ಲ. ಯಾವುದೋ ಸಂದರ್ಭದಲ್ಲಿ ಹೇಳಿಕೆ ಕೊಟ್ಟಿರುತ್ತಾರೆ. ಎಲ್ಲಿಯೂ ನಾನೇ ಸಿಎಂ ಆಗುತ್ತೇನೆಂದು ಯಾರು ಹೇಳಿಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ. ಅಲ್ಲಿವರೆಗೂ ಅಭಿಮಾನಿಗಳು ಕಾಯಬೇಕು. ಸದ್ಯಕ್ಕೆ ಅಂತಹ ಆಸೆ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ದೆಹಲಿ ಭೇಟಿಯನ್ನು ರಾಜಕೀಯ ಎಂದು ಪರಿಗಣಿಸಬಾರದು. ಮಾಧ್ಯಮಗಳು ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದರೆ, ಜನರು ಸರ್ಕಾರದ ಮೇಲೆ ಕೋಪಗೊಳ್ಳುತ್ತಾರೆ, 2028ರಲ್ಲಿ ಸಿಎಂ ಹುದ್ದೆಗೆ ಸಿದ್ಧನಾಗುವ ಯೋಜನೆ ಇದೆಯೇ ಹೊರತು ಈಗಲ್ಲ. ನನ್ನನ್ನು ಸಿಎಂ ಆಗಿ ನೋಡಲು ಕಾತರರಾಗಿರುವ ಅವರ ಬೆಂಬಲಿಗರು ಅಲ್ಲಿಯವರೆಗೆ ಕಾಯಬೇಕು ಎಂದರು.

‘ಸತೀಶ್ ಜಾರಕಿಹೊಳಿ ನೆಕ್ಸ್ಟ್ ಸಿಎಂ’ ಎಂಬ ಆನ್‌ಲೈನ್ ಪ್ರಚಾರದ ಕುರಿತು ಪ್ರತಿಕ್ರಿಯಿಸಿ, ನನ್ನ ಬೆಂಬಲಿಗರು ಇಂತಹ ಪ್ರಚಾರವನ್ನು ಮಾಡಿದ್ದಾರೆ. ಆದರೆ, 2028 ರಲ್ಲಿ ಮುಂದಿನ ಸಿಎಂ ರೇಸ್‌ನಲ್ಲಿ ನಾನೇ ಇರುತ್ತೇನೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com