ಸೌಮ್ಯಾ ರೆಡ್ಡಿ ನೇಮಕ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಕವಿತಾ ರೆಡ್ಡಿಗೆ ಗೇಟ್ ಪಾಸ್

ಪಕ್ಷದ ನಿರ್ಣಯಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ ಮತ್ತು ಟೀಕಿಸಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಮತ್ತು ಪಕ್ಷದಲ್ಲಿ ಅವರಿಗೆ ನೀಡಲಾಗಿದ್ದ ಎಲ್ಲ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಹೇಳಿದೆ.
ಕವಿತಾ ರೆಡ್ಡಿ
ಕವಿತಾ ರೆಡ್ಡಿ
Updated on

ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿದೆ.

ಪಕ್ಷದ ನಿರ್ಣಯಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ ಮತ್ತು ಟೀಕಿಸಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಮತ್ತು ಪಕ್ಷದಲ್ಲಿ ಅವರಿಗೆ ನೀಡಲಾಗಿದ್ದ ಎಲ್ಲ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಹೇಳಿದೆ. ಸೆಪ್ಟೆಂಬರ್ 5 ರಂದು ಸಮಿತಿಯ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಂತೆ, ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಶ್ನಿಸಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಪಕ್ಷಕ್ಕೆ ಸಂಬಂಧಿಸಿದ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸಬೇಡಿ ಎಂದು ಆಗ ಎಚ್ಚರಿಕೆ ನೀಡಲಾಗಿತ್ತು. ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಕವಿತಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿಂದೆ, ರಾಜ್ಯ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕದ ಬಗ್ಗೆ ಕವಿತಾ ಧ್ವನಿಯೆತ್ತಿದ್ದರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬದಿಗಿಡಲಾಗಿದೆ ಎಂದ ಆರೋಪಿಸಿದ್ದರು. ಶಿಸ್ತು ಸಮಿತಿ ಆಕೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

ನಿಮ್ಮಿಂದ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಮತ್ತು ನಿಮ್ಮ ಅಧ್ಯಕ್ಷತೆಯಲ್ಲಿ ನೀವು ಅದನ್ನು ಮತ್ತೆ ಮತ್ತೆ ಸಾಬೀತುಪಡಿಸಿದ್ದೀರಿ! ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಸಿದ್ಧಾಂತಕ್ಕೆ ಕಟ್ಟುಬಿದ್ದ ಮಹಿಳೆ ಮೇಲಾಗುವ ದೌರ್ಜನ್ಯ ರಾಹುಲ್‌ ಗಾಂಧಿಗೆ ಅರ್ಥವಾಗಬಹುದೇನೋ, ‘ನನ್ನಂತ ಮಹಿಳೆ, ಅತ್ಯಂತ ಪ್ರಭಾವಿಶಾಲಿಗಳಿಗೂ ಹೆದರುವುದಿಲ್ಲ. ಲಿಂಗ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವುದನ್ನು ನಿಲ್ಲಿಸುವುದಿಲ್ಲ’ ಎಂದು ಕವಿತಾ ರೆಡ್ಡಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕವಿತಾ ರೆಡ್ಡಿ
ನಟಿ ಸಂಯುಕ್ತಾ ಹೆಗಡೆ ಮತ್ತು ಗೆಳತಿಯರ ಬಳಿ ಕ್ಷಮೆ ಕೋರಿದ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com