ಮುನಿರತ್ನ 'ಕುರುಕ್ಷೇತ್ರ'ಕ್ಕೆ ಬಿದ್ದ ಬೆಂಕಿಯಿಂದ ಚನ್ನಪಟ್ಟಣ ಉಪಚುನಾವಣೆ ಮೇಲೆ ಕರಿಛಾಯೆ? ಆತಂಕದಲ್ಲಿ ಕೇಸರಿ ಕಲಿಗಳು!

ಮುನಿರತ್ನ ವಿರುದ್ಧ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಒತ್ತಾಯಿಸಿದ್ದಾರೆ.
ಶಾಸಕ ಮುನಿರತ್ನ
ಶಾಸಕ ಮುನಿರತ್ನ
Updated on

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ತಿರುಗೇಟು ನೀಡಲು ಪ್ರಯತ್ನಿಸುತ್ತಿದೆ. ರಾಜ್ಯ ಜೆಡಿಎಸ್‌ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮುನಿರತ್ನ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಆರೋಪಿಸಿದ್ದಾರೆ.

ಮುನಿರತ್ನ ವಿರುದ್ಧ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ದಲಿತ ಧಾರ್ಮಿಕ ಮುಖಂಡರು ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಒಕ್ಕಲಿಗರು ಮತ್ತು ದಲಿತ ಸಮುದಾಯದ ಒಂದು ವಿಭಾಗವು ಮುನಿರತ್ನ ಹೇಳಿಕೆ ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗಳನ್ನು ನಡೆಸಿದೆ. ಇದೇ ವೇಳೆ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಮುನಿರತ್ನ ಹೇಳಿಕೆಯನ್ನು ಕ್ಷಮಿಸಲಾಗದು ಎಂದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯವರೆಗೂ ಕಾಂಗ್ರೆಸ್ ಇದೇ ವಿಷಯವನ್ನು ಮುಂದುವರಿಸಿಕೊಂಡು ಹೋಗಲು ಬಯಸುತ್ತದೆ, ಇದು ಒಕ್ಕಲಿಗರು ಮತ್ತು ದಲಿತರ ಪರ ಧ್ರುವೀಕರಣಕ್ಕೆ ಸಹಾಯ ಮಾಡುತ್ತದೆ ಎಂದು ಪಕ್ಷ ನಿರೀಕ್ಷಿಸಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಶಾಸಕ ಮುನಿರತ್ನ
ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸರ್ಕಾರಕ್ಕೆ ಒಕ್ಕಲಿಗ ನಾಯಕರ ಮನವಿ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಆದರೆ ಬೆಂಗಳೂರು ನಗರದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಮುನಿರತ್ನ ಪ್ರಭಾವ ಸೀಮಿತವಾಗಿರುವುದರಿಂದ ಮುನಿರತ್ನ ಅವರ ಕಾರಣ ಯಾವುದೇ ಚನ್ನಪಟ್ಟಣ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ. ನಾಗಮಂಗಲ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಈ ವಿಷಯವನ್ನು ಪ್ರಚಾರಕ್ಕೆ ತರುತ್ತಿದ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

ಶಾಸಕ ಮುನಿರತ್ನ ಬಂಧನ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶನಿವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ ಆಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಸಾಬೀತುಪಡಿಸಲು ಎಫ್‌ಎಸ್‌ಎಲ್ ವರದಿಯನ್ನು ಕೈಗೊಳ್ಳುವ ಮೊದಲು, ರಾಜ್ಯ ಸರ್ಕಾರ ಅವರ ವಿರುದ್ಧ ತರಾತುರಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ ಪ್ರತಿಯೊಬ್ಬರೂ ನೆಲದ ಕಾನೂನನ್ನು ಗೌರವಿಸಬೇಕು ಎಂದು ನಿಖಿಲ್ ಮಾಧ್ಯಮಗಳಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com