ಶಾಸಕ ಸ್ಥಾನದಿಂದ ಮುನಿರತ್ನರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ.ಪಾಟೀಲ್ ಪತ್ರ

ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕಾನೂನು ಸಚಿವ ಎಚ್​ಕೆ ಪಾಟೀಲ್ ಅವರು ಸ್ಪೀಕರ್​ ಯುಟಿ ಖಾದರ್ ಅವರಿ​​ಗೆ ಪತ್ರ ಬರೆದಿದ್ದಾರೆ.
ಮುನಿರತ್ನ - ಎಚ್.ಕೆ.ಪಾಟೀಲ್
ಮುನಿರತ್ನ - ಎಚ್.ಕೆ.ಪಾಟೀಲ್
Updated on

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದ ನಂತರ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿದೆ.

ಮತ್ತೊಂದೆಡೆ ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕಾನೂನು ಸಚಿವ ಎಚ್​ಕೆ ಪಾಟೀಲ್ ಅವರು ಸ್ಪೀಕರ್​ ಯುಟಿ ಖಾದರ್ ಅವರಿ​​ಗೆ ಪತ್ರ ಬರೆದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಎಚ್​ಕೆ ಪಾಟೀಲ್ ಅವರು ಸ್ಪೀಕರ್ ಗೆ ಬರೆದ ಪತ್ರದಲ್ಲಿ, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ . ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುನಿರತ್ನ - ಎಚ್.ಕೆ.ಪಾಟೀಲ್
ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತ ಮಹಿಳೆಗೆ ಬೆದರಿಕೆ, ಆಡಿಯೋ ವೈರಲ್..!

“ನೀತಿ-ನಿರೂಪಣಾ ಸಮಿತಿ” (Ethics Committee of State Legislature) ರಚನೆ ಮಾಡಿ. ಆ ಸಮಿತಿಯ ಮೂಲಕ ಅಸಭ್ಯವಾಗಿ ವರ್ತಿಸುವ ಸದಸ್ಯರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು ಎಂದು ಸ್ಪೀಕರ್​ ಯುಟಿ ಖಾದರ್​​ ಅವರಿಗೆ ಬರೆದ ಪತ್ರದಲ್ಲಿ ಎಚ್ ಕೆ ಪಾಟೀಲ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com