ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

ಸಿದ್ದರಾಮಯ್ಯ ಉತ್ತಮ ನಾಯಕ. ಅವರು, ಎಷ್ಟೇ ಕಳಂಕರಹಿತರಾಗಿದ್ದರೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಲಿ, ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಸಿಎಂ ಆಗಲಿ.
ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
Updated on

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟುಹಿಡಿದಿದ್ದು, ಇದರ ಜೊತೆಗೆ ಇದೀಗ ಸ್ವಪಕ್ಷೀಯರಿಂದಲೂ ಸಿದ್ದರಾಮಯ್ಯ ರಾಜೀನಾಮೆ ಕೂಗು ಕೇಳಿಬಂದಿದೆ.

ಖಾಸಗಿ ವಾಹನಿಯೊದರ ಜೊತೆಗೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ ಅವರು, ಸಿದ್ದರಾಮಯ್ಯ ಉತ್ತಮ ನಾಯಕ. ಅವರು, ಎಷ್ಟೇ ಕಳಂಕರಹಿತರಾಗಿದ್ದರೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಲಿ, ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಸಿಎಂ ಆಗಲಿ. ಪಕ್ಷದ 136 ಶಾಸಕರು ಸಿಎಂ ಸಿದ್ದರಾಮಯ್ಯ ಜತೆಗಿದ್ದಾರೆ ಎಂದು ಹೇಳಿದರು.

ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು. ಅಲ್ಲೂ ಕೂಡ ಸಿಎಂ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷಗಳು ರಾಜೀನಾಮೆ ವಿಚಾರ ಬಗ್ಗೆ ಮಾತನಾಡುತ್ತಿವೆ. ಪ್ರಧಾನಿ ಮೋದಿ ಹರಿಯಾಣ ರಾಜ್ಯದಲ್ಲಿ ಚುನಾವಣಾ ಪ್ರಚಾರ ವೇಳೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಅದರಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಒಳಿತು ಎಂದು ಸಲಹೆ ನೀಡಿದರು.

40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದ್ದಂತೆ ಕಳಂಕರಹಿತರಾಗಿದ್ದಾರೆ. ಹೈಕಮಾಂಡ್‌ ಸೇರಿದಂತೆ 136 ಶಾಸಕರ ಸಂಪೂರ್ಣ ಬೆಂಬಲವೂ ಇದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಜೆಡಿಎಸ್‌, ಬಿಜೆಪಿಯವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ತಮಗಿದೆ ಎಂದರು.

ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
Muda ಹಗರಣ: ಸಿದ್ದರಾಮಯ್ಯ ಪುತ್ರ, ಪತ್ನಿ ವಿರುದ್ಧ FIR ದಾಖಲಿಸಿ: ಲೋಕಾಯುಕ್ತಕ್ಕೆ ಪ್ರದೀಪ್ ಕುಮಾರ್ ದೂರು

ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯ ಇದ್ದರೂ ಈಗ ಆತ್ಮೀಯರಾಗಿದ್ದೇವೆ. ನನ್ನ ಜೊತೆ ಬೇರೆ ಯಾವ ನಾಯಕರೂ ಇಲ್ಲ. ಇದು ನನ್ನ ವೈಯುಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ, ರಾಜೀನಾಮೆ ಕೇಳುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಸದ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಿ ಆ ಬಳಿಕ ತಪ್ಪಿಲ್ಲ ಅಂದರೆ ಅವರೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಸಲಹೆ ನೀಡಿದರು.

ಕೋವಿವಾಡ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷ, ಮುಖ್ಯಮಂತ್ರಿ ರಾಜೀನಾಮೆಗೆ ಯಾವುದೇ ಕಾರಣವಿಲ್ಲ ಎಂದು ನಾನೇ ಹೇಳುತ್ತಿದ್ದೇನೆ. ಇದೆಲ್ಲವೂ ಬಿಜೆಪಿ-ಜೆಡಿಎಸ್ ಷಡ್ಯಂತ್ರ, ನಾವೆಲ್ಲೂ ಸಿದ್ದರಾಮಯ್ಯ ಪರವಾಗಿದ್ದೇವೆ. ಮುಡಾ ಹಗರಣದಲ್ಲಿ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿರುವುದೇಕೆ? ತಮ್ಮ ಸಂಪುಟದಲ್ಲೇ ಕಳಂಕಿತ ನಾಯಕರಿಗೆ ಸ್ಥಾನ ನೀಡಿದ್ದಾರೆ. ಮೊದಲು ಅವರನ್ನು ವಜಾಗೊಳಿಸಲಿ ಎಂದು ತಿಳಿಸಿದರು.

ಸಚಿವ ಸಂಪುಟ, ಹೈಕಮಾಂಡ್ ಮತ್ತು ಶಾಸಕರು ಸಿದ್ದರಾಮಯ್ಯ ಪರ ಇದ್ದು, ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಹೇಳಿದ್ದಾರೆ.

ಎಫ್‌ಐಆರ್ ದಾಖಲಾದರೂ ಅವರ ವಿರುದ್ಧ ಯಾವ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂಬುದು ಮುಖ್ಯವಾಗಿದ್ದು, ಜಾಮೀನು ಸಿಕ್ಕರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ, ಅವರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ. ಮುಡಾದಿಂದ 14 ನಿವೇಶನಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಹಿಂದಿನ ಆಡಳಿತಾವಧಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹೀಗಾಗಿ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
ನಾನು ಏನೂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಸಿದ್ದರಾಮಯ್ಯ ಅವರ ಆಪ್ತ ಸಚಿವ ಕೆ ಎನ್ ರಾಜಣ್ಣ ಅವರು ಕೋವಿವಾಡ ಅವರ ಹೇಳಿಕೆಗ ಆಕ್ರೋಶ ವ್ಯಕ್ತಪಡಿಸಿದ್ದು, ಕೋಳಿವಾಡ ಅವರಿಗೆ ವಯಸ್ಸಾಗಿದೆ. ಅವರು ಬೆಳಿಗ್ಗೆ ಹೇಳಿದ್ದು, ಮಧ್ಯಾಹ್ನ, ಮಧ್ಯಾಹ್ನ ಹೇಳಿದ್ದು ಸಂಜೆಗೆ ನೆನಪಿರುವುದಿಲ್ಲ. ಹೀಗಾಗಿ ಅವರ ಹೇಳಿಕೆಗೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ ಎಂದಿದ್ದಾರೆ.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ನಲ್ಲಿ ಬಂಡಾಯ ಶುರುವಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ಈಗಾಗಲೇ ಹಲವು ನಾಯಕರು ಸಿಎಂ ಸ್ಥಾನಕ್ಕಾಗಿ ಪೈಪೋಟಿಗೆ ಬಿದ್ದಿದ್ದಾರೆ. ದೆಹಲಿ ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಸಂಚು ರೂಪಿಸಿದ್ದೇ ಡಿಕೆ.ಶಿವಕುಮಾರ್ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ 2016-2018ರ ನಡುವೆ ಐದು ಬಾರಿ ಶಾಸಕರಾಗಿದ್ದ ಕೋಳಿವಾಡ್ ಅವರು, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು. ಅವರ ಪುತ್ರ ಪ್ರಕಾಶ್ ಕೋಳಿವಾಡ್ ಪ್ರಸ್ತುತ ರಾಣೆಬೆನ್ನೂರು ಕಾಂಗ್ರೆಸ್ ಶಾಸಕರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com