ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ: Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಏನಂತೀರಿ!

ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಸಿಬಿಐ ರಾಜ್ಯ ಪ್ರವೇಶಕ್ಕೆ ಕರ್ನಾಟಕ ಸರ್ಕಾರದಿಂದ ನಿರ್ಬಂಧ ಮಾಡಿರುವ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ, ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿ
ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com