ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರೆಲ್ಲರೂ ನಾಶವಾಗ್ತಾರೆ; ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ಇನ್ನೂ 50 ಪ್ರಕರಣ ಬಾಕಿ: HDK

ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಇದೇ ಮೊದಲು ಪ್ರಕರಣ ದಾಖಲಾಗಿರುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ ಇನ್ನೂ 50 ಪ್ರಕರಣಗಳು ದಾಖಲಾಗಿವೆ. ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ , ಕರ್ನಾಟಕದಲ್ಲಿ ರಾಜಕಾರಣ ಹಿಂದೆಂದುಈ ರೀತಿಯ ಬಿಸಿ ನೋಡಿರಲಿಲ್ಲ, ಹಿಂದೆ ದೇವೇಗೌಡರು ಇದ್ದಾಗ ನಡೆಯುತ್ತಿತ್ತು. ಕಾಂಗ್ರೆಸ್ ಬಂದ ಮೇಲೆ, ಆಡಳಿತವನ್ನು ಯಾವ ರೀತಿ ದುರ್ಬಳಕೆ ಮಾಡ್ಕೊಳ್ತಿದ್ದಾರೆ, ಅಧಿಕಾರಿಗಳು ಕೆಳಹಂತಕ್ಕೆ ಇಳಿದು ಸರ್ಕಾರದ ಆದೇಶದ ಪಾಲನೆ ಮಾಡ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಕಾರ್ಯವೈಖರಿ ಪ್ರಾರಂಭ ಮಾಡಿದೆ ಈ ಸರ್ಕಾರ, ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ಕಾಲವೇ ನಿರ್ಣಯ ಮಾಡಬೇಕು.

ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಡಿ ಕುಮಾರಸ್ವಾಮಿ
ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್‌ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ ತನಿಖೆ ಮಾಡಬೇಕು ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ರಾಜ್ಯಪಾಲರು ಸರ್ಕಾರದಿಂದ ಮಾಹಿತಿ ಕೋರಿ ಪತ್ರ ಬರೆಯುತ್ತಾರೆ. ಆದರೆ ಅದಕ್ಕೆ ಕ್ಯಾಬಿನೆಟ್ ಅನುಮತಿ ಇಲ್ಲದೆ ಉತ್ತರ ಕೊಡಬಾರದು ಎಂಬ ನಿರ್ಧಾರ ಮಾಡಿದ್ದಾರೆ. ಸರ್ಕಾರದ ಅಕ್ರಮ, ಅಧಿಕಾರ ದುರುಪಯೋಗ ಹೊರಗಡೆ ಬರಬಾರದು ಎಂಬ ಹಿನ್ನೆಲೆಯಲ್ಲಿ ತರಾತುರಿಯ ನಿರ್ಧಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ. ರಾಜ್ಯಪಾಲರು ನನ್ನ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಪ್ರೇರಿತ ಎಂದು ಆರೋಪ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ 2011 ರಲ್ಲಿ ವಿರೋಧ ಪಕ್ಷದಲ್ಲಿದ್ದಾಗ ರಾಜ್ಯಪಾಲರ ಅಧಿಕಾರಾರದ ಪರವಾಗಿ ಮಾತನಾಡಿದ್ದ ವಿಡಿಯೋ ಬಿಡುಗಡೆ ಆಗಿ ಚರ್ಚೆಗೆ ಗ್ರಾಸವಾಗುತ್ತಿದೆ. 2011 ರಲ್ಲಿ ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಏನು ಮಾತನಾಡಿದ್ದಾರೆ ಎಂದು ತರಿಸಿಕೊಂಡು ನೋಡಲಿ ಎಂದು ಸವಾಲು ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com