ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ

'ಅವರು ಏನ್ ಮಾತಾಡ್ತಿದ್ದಾರೆ ಅಂತ ಅವರಿಗೇ ಗೊತ್ತಿಲ್ಲ': ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಕುರಿತು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಹಿಂದೆ ಬಿದ್ದಿದ್ದಾರೆ. ಇಡೀ ಕ್ರೆಡಿಟ್ ಶ್ರೀನಿವಾಸ್‌ಗೆ ಹೋಗಬೇಕು.
Published on

ನೆಲಮಂಗಲ: ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಎಂ.ಚಂದ್ರಶೇಖರ್ ಕುರಿತು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಟೀಕಿಸಿದರು.

ಕೆಪಿಸಿಸಿಯಿಂದ ಚಂದ್ರಶೇಖರ್ ಪತ್ರ ಸ್ವೀಕರಿಸಿದ್ದಾರೆ ಎಂಬ ಕುಮಾರಸ್ವಾಮಿ ಆರೋಪ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಅವರು ಏನ್ ಮಾತಾಡ್ತಿದ್ದಾರೆ ಅಂತ ಅವರಿಗೇ ಗೊತ್ತಿಲ್ಲ.ಕೆಪಿಸಿಸಿಗೂ ಚಂದ್ರಶೇಖರ್ ಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.

ನಾನು ಬೆಂಗಳೂರಿನಲ್ಲಿ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕೆಲಸ ಮಾಡಿಕೊಂಡು ಇದ್ದೆ. ಕುಮಾರಸ್ವಾಮಿಗೆ ಕೆಪಿಸಿಸಿ ನೆನಪಾದರೆ ನಾನು ಏನು ಹೇಳಲಿ ಎಂದರು.

ಕಾಂಗ್ರೆಸ್ ಸರ್ಕಾರದ ಏಳು ಸಚಿವರು ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಕ್ಕೆ ತಮ್ಮ ಬಳಿ ದಾಖಲೆಗಳಿವೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ‘ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ನಾನು ಚಂದ್ರಶೇಖರ್ ಅವರನ್ನು ನೋಡಿಲ್ಲ, ಭೇಟಿಯೂ ಆಗಿಲ್ಲ ಇಲ್ಲ, ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಮುಡಾ ಹಗರಣ ಕುರಿತು ಶನಿವಾರ ಟೀಕಿಸಿದ ಕುಮಾರಸ್ವಾಮಿ, ವಿರೋಧಿಗಳ ವಿರುದ್ಧ ಎಫ್ ಐಆರ್ ದಾಖಲಿಸುತ್ತಾ, ಅವರನ್ನು ಬಂಧಿಸುವ ಅನೈತಿಕತೆಯಲ್ಲಿ ಆಡಳಿತ ತೊಡಗಿದೆ ನನ್ನನ್ನು ಸಿಲುಕಿಸಲು ರಾಜ್ಯ ಸರ್ಕಾರ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದರು.

ಗೃಹ ಸಚಿವರು ಸೇರಿದಂತೆ ಸರ್ಕಾರ ನನ್ನ ವಿರುದ್ಧ ಪಿತೂರಿ ನಡೆಸುತ್ತಿದೆ. ಅವರು ಉನ್ನತ ಪೊಲೀಸರು ಮತ್ತು ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
ರಾಜಭವನ ಸಿಬ್ಬಂದಿ ತನಿಖೆ: ಅನುಮತಿ ಕೋರಿದ್ದ ಐಜಿಪಿ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಸೋಲೂರನ್ನು ಮಾಗಡಿ ತಾಲೂಕಿನಿಂದ ಬೇರ್ಪಡಿಸಿ ನೆಲಮಂಗಲ ತಾಲೂಕಿಗೆ ಸೇರಿಸುವ ಕುರಿತು ಬಿಜೆಪಿ ಸಂಸದ ಸುಧಾಕರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಕುರಿತು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಹಿಂದೆ ಬಿದ್ದಿದ್ದಾರೆ. ಇಡೀ ಕ್ರೆಡಿಟ್ ಶ್ರೀನಿವಾಸ್‌ಗೆ ಹೋಗಬೇಕು. ಸುಧಾಕರ್ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ಕ್ರೆಡಿಟ್ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ. ನೆಲಮಂಗಲದ ಯಾವುದೇ ಅಭಿವೃದ್ಧಿಯ ಕ್ರೆಡಿಟ್ ಶಾಸಕ ಶ್ರೀನಿವಾಸ್ ಗೆ ಸಲ್ಲಬೇಕು ಎಂದರು.

X

Advertisement

X
Kannada Prabha
www.kannadaprabha.com