
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.
ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಕಿರುಕುಳ, ಸೇಡು ತೀರಿಸಿಕೊಳ್ಳಲು ED ಪ್ರಧಾನಿ ನರೇಂದ್ರ ಮೋದಿಯ ಒಂದು ಸಾಧನವಾಗಿದೆ ಎಂದು ಆರೋಪಿಸಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ECIR ದಾಖಲಿಸಿದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾಜಕೀಯ ವಿರೋಧಿಗಳ ವಿರುದ್ಧ ಕಿರುಕುಳ, ಸೇಡು ತೀರಿಸಿಕೊಳ್ಳಲು ಅಜೈವಿಕ ಪ್ರಧಾನಿ ಇಡಿಯನ್ನು ಒಂದು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ರಹಸ್ಯವೇನೂ ಅಲ್ಲ ಎಂದಿದ್ದಾರೆ.
2023ರ ಮೇ ನಲ್ಲಿ ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಜನರು ಸಾರಸಗಟ್ಟಾಗಿ ತಿರಸ್ಕರಿಸಿದ್ದರು. ಆ ಅವಮಾನವನ್ನು ಅವರು ಮರೆತಿಲ್ಲ. ಅವರ ಹಾಗೂ ಇಡಿಯ ಷಡ್ಯಂತ್ರ ಶೀಘ್ರದಲ್ಲಿಯೇ ಬಹಿರಂಗಗೊಳ್ಳಲಿದೆ ಎಂಬ ವಿಶ್ವಾಸದಲ್ಲಿದೆ ಕಾಂಗ್ರೆಸ್. ಈ ಎಲ್ಲಾ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಎದುರಿಸಲಿದ್ದಾರೆ. ಹೀಗಾಗಿ ನಾವು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Advertisement