ಕುಮಾರಸ್ವಾಮಿ ಭೇಟಿಯಾಗಿ ಗೌಪ್ಯ ಮಾತುಕತೆ: ತುಮಕೂರು ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿ ಸೋಮಣ್ಣ?

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಿ ಸೋಮಣ್ಣ ಭೇಟಿ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಹೆಚ್‌ಡಿಕೆ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸೋಮಣ್ಣ ಮಾತುಕತೆ ನಡೆಸಿದ್ದಾರೆ.
ಸೋಮಣ್ಣ- ಎಚ್.ಡಿಕೆ ಭೇಟಿ
ಸೋಮಣ್ಣ- ಎಚ್.ಡಿಕೆ ಭೇಟಿ

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಿ ಸೋಮಣ್ಣ ಭೇಟಿ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಹೆಚ್‌ಡಿಕೆ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸೋಮಣ್ಣ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಜೆಡಿಎಸ್‌ ಮೈತ್ರಿ ಬಳಿಕ ಎರಡನೇ ಬಾರಿಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಬುಧವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರನ್ನು ತೋಟದ ಮನೆಯಲ್ಲಿ ಭೇಟಿ ಮಾಡಿ ಕಾರ್ಯತಂತ್ರದ ಕುರಿತು ಚರ್ಚಿಸಿದರು. ಮೈತ್ರಿ ಪಾಲುದಾರರ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ನಾಯಕರನ್ನು  ಭೇಟಿ ಮಾಡಿಲು ಶೀಘ್ರವೇ ದೆಹಲಿಗೆ ತೆರಳುವ ಹಿನ್ನೆಲೆಯಲ್ಲಿ ಇಬ್ಬರ ಸಭೆ ಮಹತ್ವ ಪಡೆದುಕೊಂಡಿದೆ.

ನಾವು ಸಾಕಷ್ಟು ವಿಷಯಗಳನ್ನು ಚರ್ಚಿಸಿದ್ದೇವೆ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರ ಆತಿಥ್ಯದಿಂದ ನಾನು ಸಂತೋಷಗೊಂಡಿದ್ದೇನೆ ಎಂದು ಸೋಮಣ್ಣ  ಹೇಳಿದರು. ಅವರು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ವಿಷಯವನ್ನು ತಳ್ಳಿಹಾಕಲಿಲ್ಲ.

ತಿಪಟೂರು ಸಮೀಪದ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಮಂಗಳವಾರ ಭೇಟಿ ನೀಡಿ ಕರಿಬಸವ ಶಿವಯೋಗಿ ಸ್ವಾಮಿಗಳ ಆಶೀರ್ವಾದ ಪಡೆದ ಸೋಮಣ್ಣ , ತಾವು ಈಗಾಗಲೇ ಚುನಾವಣೆಗಾಗಿ ಸಿದ್ಧತೆ ಆರಂಭಿಸಿರುವ ಸಂದೇಶ ರವಾನಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಕುರುಬ ಸಮುದಾಯದ ಧಾರ್ಮಿಕ ಮುಖ್ಯಸ್ಥ ಶ್ರೀ ಈಶ್ವರಾನಂದಪುರಿ ಸ್ವಾಮಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಿದ್ಧರಬೆಟ್ಟದಲ್ಲಿ ಶಾಖಾ ಮಠ ಸ್ಥಾಪಿಸಿರುವ ಸ್ವಾಮಿ ತುಮಕೂರು ಲೋಕಸಭಾ ಕ್ಷೇತ್ರದ ಕೆಲವೆಡೆ ಸಮುದಾಯದ ಮೇಲೆ ಪ್ರಭಾವ ಬೀರಿದ್ದಾರೆ. ಸಿದ್ದಗಂಗಾ ಮಠದಲ್ಲಿ 'ಗುರುಭವನ' ಉದ್ಘಾಟನೆ  ಸಮಾವೇಶ ನಡೆಸಿದರು, ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಭಾಗವಹಿಸಿ ಸೋಮಣ್ಣ ಅವರನ್ನು ಉತ್ತಮ ನಾಯಕ ಎಂದು ಹೊಗಳಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದ್ದಂತೆ ವೀರಶೈವ ಲಿಂಗಾಯತ ಪ್ರಮುಖರಾದ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ತಂದೆ-ಮಗ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಸೋಮಣ್ಣ ಆರೋಪಿಸಿದರು.ಮಇತ್ತೀಚೆಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಕ್ಕೆ ಪ್ರಯತ್ನಿಸಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಇನ್ನು ಮುಂದೆ ಶೀತಲ ಸಮರ ನಡೆಸುವುದಿಲ್ಲ ಎಂಬ ಭರವಸೆಯೊಂದಿಗೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ರಾಜಕೀಯದಿಂದ ನಿವೃತ್ತರಾಗಿರುವ ಹಾಲಿ ಬಿಜೆಪಿ ಸಂಸದ ಜಿ ಎಸ್ ಬಸವರಾಜು ಅವರು ಸೋಮಣ್ಣ ಅವರನ್ನು ಬೆಂಬಲಿಸಿದ್ದಾರೆ, 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿ (ಎಸ್) ಮೈತ್ರಿ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು  ಬಸವರಾಜು  ಸೋಲಿಸಿದ್ದರು.

ತು ಮಕೂರು ಲೋಕಸಭಾ ಕ್ಷೇತ್ರಕ್ಕೆ ಸೋಮಣ್ಣ ಜೊತೆಗೆ, ಚಿಕ್ಕನಾಯಕನಹಾಳ್ಳಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಅವರನ್ನು ಯಡಿಯೂರಪ್ಪ ಮತ್ತು ವಿಜಯೇಂದ್ರ ಬೆಂಬಲಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com