ಮಾಜಿ ಸಚಿವ ಶ್ರೀರಾಮುಲು ಸಹೋದರಿ ಜೆ ಶಾಂತಾ YSR ಕಾಂಗ್ರೆಸ್‌ ಪಕ್ಷ ಸೇರ್ಪಡೆ

ಕರ್ನಾಟಕ ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ‌ ಸಂಸದೆ ಜೆ.ಶಾಂತಾ ಅವರು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. 
ಜೆ ಶಾಂತಾ YSR ಕಾಂಗ್ರೆಸ್‌ ಪಕ್ಷ ಸೇರ್ಪಡೆ
ಜೆ ಶಾಂತಾ YSR ಕಾಂಗ್ರೆಸ್‌ ಪಕ್ಷ ಸೇರ್ಪಡೆ

ವಿಜಯವಾಡ: ಕರ್ನಾಟಕ ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ‌ ಸಂಸದೆ ಜೆ.ಶಾಂತಾ ಅವರು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. 

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ರೆಡ್ಡಿ ಸಮ್ಮುಖದಲ್ಲಿ ವಿಜಯವಾಡದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ವಿಜಯವಾಡದ ತಾಡಿಪಲ್ಲಿ ಸಿಎಂ ಕ್ಯಾಂಪ್ ಆಫೀಸ್‌ನಲ್ಲಿ ಪಕ್ಷ ಸೇರ್ಪಡೆಯಾದರು.ಶಾಂತಾ ಅವರು ಮುಂಬರುವ ಲೋಕಸಭಾ‌ ಚುನಾವಣೆಯಲ್ಲಿ ಹಿಂದೂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಈ ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಂತಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಲೋಕಸಭಾ ಕ್ಷೇತ್ರದಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಶಾಂತಾ ಅವರು ವಾಲ್ಮೀಕಿ ಸಮುದಾಯದವರಾಗಿದ್ದಾರೆ. ಹಿಂದೂಪುರ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ 4.5 ಲಕ್ಷ ಮತದಾರರಿದ್ದಾರೆ.

ಅನಂತಪುರಂ ಜಿಲ್ಲೆಯ ಗುಂತಕಲ್ ಪಟ್ಟಣದ ನಿವಾಸಿಯಾಗಿರುವ ಜೆ.ಶಾಂತಾ ಅವರು 2009 ರಲ್ಲಿ ಶ್ರೀರಾಮುಲು ಸಹಕಾರದಿಂದ ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಜಗನ್‌ಮೋಹನ್‌ರೆಡ್ಡಿ ಸಂಸದರಾಗಿದ್ದಾಗ ಲೋಕಸಭೆಯಲ್ಲಿ ಶಾಂತಾ ಪರಿಚಯವಾಗಿದ್ದು, ಇದು ಶಾಂತಾ ಅವರ ಆಂಧ್ರಪ್ರದೇಶದ ರಾಜಕೀಯ ಎಂಟ್ರಿಗೆ‌ ಕಾರಣವಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com