ದರ ಏರಿಕೆ, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಏಪ್ರಿಲ್ 7 ರಿಂದ ರಾಜ್ಯ ಸರ್ಕಾರದ ವಿರುದ್ಧ BJP 'ಜನಾಕ್ರೋಶ ಯಾತ್ರೆ'

ರಾಜ್ಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ.
ಬಿಜೆಪಿ ಪ್ರತಿಭಟನೆ. (ಸಂಗ್ರಹ ಚಿತ್ರ)
ಬಿಜೆಪಿ ಪ್ರತಿಭಟನೆ. (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬೆಲೆ ಏರಿಕೆ, ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್.7ರಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿ ಮುಂದಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.

ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಈ ಧರಣಿ ತುದಿ ಮುಟ್ಟಿಸುವ ಕುರಿತು ಎ.2ರಂದು ನಿರ್ಧರಿಸಲಿದ್ದೇವೆ ಎಂದು ತಿಳಿಸಿದರು.

ಎ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕುಗಳಲ್ಲಿ, ಮಂಡಲದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಎಪ್ರಿಲ್ 6ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಹೋರಾಟ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ.

ಏ.7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, ಏ.8 ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇದೆ. ಏ.9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, ಏ.10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಎಂದರು.

ಬಿಜೆಪಿ ಪ್ರತಿಭಟನೆ. (ಸಂಗ್ರಹ ಚಿತ್ರ)
ಬೆಂಬಲಿಸಿದವರೂ ದೂರ; ಬಂಡಾಯದ ಹಾದಿಯಲ್ಲಿ ಒಂಟಿಯಾದ ಯತ್ನಾಳ್ (ಸುದ್ದಿ ವಿಶ್ಲೇಷಣೆ)

ಏಪ್ರಿಲ್. 13ರಿಂದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಎರಡನೇ ಹಂತದ ಹೋರಾಟ ಇರುತ್ತದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಇದು ಸಂಚರಿಸಲಿದೆ. ಪ್ರತಿ ಜಿಲ್ಲೆಯಲ್ಲಿ ನಗರದಲ್ಲಿ 2-3 ಕಿಮೀ ಪಾದಯಾತ್ರೆ, ಬಳಿಕ ಸಭೆ ನಡೆಯಲಿದೆ. ಮುಖಂಡರು ಭಾಗವಹಿಸುತ್ತಾರೆಂದು ವಿವರಿಸಿದರು.

ರಾಜ್ಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4 ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ 20 ಲಕ್ಷ ಇದ್ದುದನ್ನು 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ; ಇಮಾಮರ ವೇತನ ಹೆಚ್ಚಿಸಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ; ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದಾರೆ ಎಂದು ವಿವರಿಸಿದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಪ್ರತಿಭಟನೆ. (ಸಂಗ್ರಹ ಚಿತ್ರ)
ಯತ್ನಾಳ್ ಉಚ್ಛಾಟನೆ: ಅಶಿಸ್ತಿನ ವಿರುದ್ಧ BJP ವರಿಷ್ಠರು ಕೈಗೊಂಡ ನಿರ್ಧಾರವನ್ನು ಸಂಭ್ರಮಿಸದಿರಿ; ಕಾರ್ಯಕರ್ತರಿಗೆ ವಿಜಯೇಂದ್ರ ಮನವಿ

ಶೋಷಿತರು, ಪೀಡಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಅನುದಾನದಲ್ಲಿ ಕಾಂಗ್ರೆಸ್ ಸರಕಾರವು 2023-24ರಲ್ಲಿ 11,144 ಕೋಟಿಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 2024-25ರಲ್ಲಿ 14,282 ಕೋಟಿ ಹಣ ಬೇರೆ ಕಡೆಗೆ ವರ್ಗಾಯಿಸಿದ್ದಾರೆ. 2025-26ರಲ್ಲಿ ಇದು 13,433 ಕೋಟಿ. ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರವು 38,860 ಕೋಟಿಯಷ್ಟು ಹಣವನ್ನು ಬೇರೆ ಕಡೆ ವರ್ಗಾಯಿಸಿ, ದುರುಪಯೋಗ ಮಾಡಿಕೊಂಡಿದೆ.

ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು, ಹಾಲಿನ ಬೆಲೆಗಳು, ಮುದ್ರಾಂಕ ಶುಲ್ಕ, ಮೆಟ್ರೋ ಪ್ರಯಾಣ ದರಗಳು ಮತ್ತು ಬಸ್ ದರಗಳನ್ನು ಹೆಚ್ಚಿಸಿದೆ. ಬೆಲೆ ಏರಿಕೆಯಿಂದಾಗಿ ಜ್ಯದಲ್ಲಿ ಜೀವನ ವೆಚ್ಚವು ತುಂಬಾ ದುಬಾರಿಯಾಗಿದೆ, ಇದು ದೇಶದಲ್ಲೇ ಅತ್ಯಧಿಕವಾಗಿದೆ, ಇದು ಸಾಮಾನ್ಯ ಜನರು ಮತ್ತು ರೈತರಿಗೆ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com