ವಿನಯ್'ಗೆ ಕಾನೂನು ನೆರವು ನೀಡದೆ ಈಗ Twitterನಲ್ಲಿ ಆರ್ಭಟಿಸುತ್ತಿರುವುದು ನಿಮ್ಮ ಆದ್ಯತೆ ತೋರಿಸುತ್ತದೆ: BJP ಕುರಿತು ಯತ್ನಾಳ್ ವ್ಯಂಗ್ಯ

ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ.
Basanagouda Patil Yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್'ಗೆ ಕಾನೂನು ನೆರವು ನೀಡದೆ ಈಗ ಟ್ವಿಟರ್ ನಲ್ಲಿ ಆರ್ಭಟಿಸುತ್ತಿರುವುದನ್ನು ನೋಡಿದರೆ, ನಿಮ್ಮ ಆದ್ಯತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಅವರು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ.

Basanagouda Patil Yatnal
ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ

ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು. ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com