ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಕೊಡಗಿನ ಕಾಂಗ್ರೆಸ್ ಶಾಸಕ ಮತ್ತು ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಕಾರಣ ಎಂದು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
Updated on

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಕೊಡಗಿನ ಕಾಂಗ್ರೆಸ್ ಶಾಸಕ ಮತ್ತು ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಕಾರಣ ಎಂದು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರಕಾರ, ವಾಟ್ಸಾಪ್‌ನಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಕೊಡಗು ಪೊಲೀಸರು ವಿನಯ್ ಸೋಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿನಯ್ ವಾಟ್ಸಾಪ್ ಗ್ರೂಪ್‌ನ ಗ್ರೂಪ್ ಅಡ್ಮಿನ್ ಆಗಿದ್ದರು.

ಅವಹೇಳನಕಾರಿ ಪೋಸ್ಟ್ ಸಂಬಂಧ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅವರು ಪೊಲೀಸರಿಗೆ ದೂರು ನೀಡಿದ್ದರು.

"ಕಾಂಗ್ರೆಸ್ ಶಾಸಕರ ವಿರುದ್ಧ ಮೂರನೇ ವ್ಯಕ್ತಿಯೊಬ್ಬರು ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ ನಂತರ ವಿನಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಕಾಂಗ್ರೆಸ್ ಶಾಸಕರು ಪೊಲೀಸರ ಮೇಲೆ ಒತ್ತಡ ಹೇರಿದ ನಂತರ ಪೊಲೀಸರು ವಿನಯ್ ಗೆ ಕಿರುಕುಳ ನೀಡಿದ್ದಾರೆ. ಆದ್ದರಿಂದ ತೆನ್ನಿರ ಮೈನಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು" ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಬಿಜೆಪಿ ಪ್ರತಿಭಟನೆ
'ರಾಜಕೀಯ ಪ್ರೇರಿತ FIR ಗಳ ವಿರುದ್ಧ ನನ್ನ ಸಾವು ಪಾಠವಾಗಬೇಕು': ಸಾವಿಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್!

ಬಿಜೆಪಿ ಕಾರ್ಯಕರ್ತರು ಇಂದು ನಗರದ ರಸ್ತೆಗಳನ್ನು ತಡೆದ ಪ್ರತಿಭಟಿಸಿದರು. ಅಲ್ಲದೆ ಎಸ್ಪಿ ಕೆ ರಾಮರಾಜನ್ ಅವರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಾಂಗ್ರೆಸ್ ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.

"ನಾಪೋಕ್ಲು ಶೌಚಾಲಯ ಶುಚಿಯಾಗಿಲ್ಲ. ದುರ್ವಾಸನೆ ಬೀರುತ್ತಿದೆ ಎಂದು ನಿವಾಸಿಯೊಬ್ಬರು ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಂಬಂಧಪಟ್ಟವರು ಪಂಚಾಯತ್‌ಗೆ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಬೇಕಾಗಿತ್ತು. ಆದರೆ ಅವರು ವಿನಯ್ ಸೇರಿದಂತೆ ವಾಟ್ಸಾಪ್ ಗ್ರೂಪ್‌ನ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಾನೂನಿನ ಪ್ರಕಾರ, ಅವಹೇಳನಕಾರಿ ಪೋಸ್ಟ್‌ಗಳಿಗಾಗಿ ನೋಟಿಸ್ ನೀಡಬೇಕಾಗಿತ್ತು. ಆದರೆ ಈ ಎಲ್ಲಾ ಕಾರ್ಯವಿಧಾನಗಳನ್ನು ನಿರ್ಲಕ್ಷಿಸಲಾಯಿತು ಮತ್ತು ವಿನಯ್ ಸೇರಿದಂತೆ ಮೂವರನ್ನು ಪೊಲೀಸರು ಬೆದರಿಸಿದರು. ಇದಕ್ಕೆ ಕಾರಣರಾದ ಮೈನಾ ಅವರನ್ನು ಜೈಲಿಗೆ ಹಾಕಬೇಕು ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಒತ್ತಾಯಿಸಿದರು.

ಸುಮಾರು ಒಂದು ಗಂಟೆಯ ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಸ್ಪಿ ಕೆ. ರಾಮರಾಜನ್ ಅವರು, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇದೇ ವೇಳೆ ತೆನ್ನಿರ ಮೈನಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ ಜಿಲ್ಲೆಯಾದ್ಯಂತ ಬಂದ್‌ಗೆ ಕರೆ ನೀಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com