'ಮಿತಿ ಮೀರದಿರಿ'- ಸಿದ್ದರಾಮಯ್ಯ, ಡಿಕೆಶಿಗೆ ವಾರ್ನಿಂಗ್: 'ಹನಿಟ್ರ್ಯಾಪ್' ಸೂಕ್ತವಾಗಿ ನಿರ್ವಹಿಸದಿದ್ದಕ್ಕೆ ಸಿಎಂ ವಿರುದ್ಧ ಹೈಕಮಾಂಡ್ ಕಿಡಿ!

ಸಿದ್ದರಾಮಯ್ ಹನಿಟ್ರ್ಯಾಪ್ ವಿಷಯವನ್ನು ಸರಿಯಾಗಿ ನಿಭಾಯಿಸಲಿಲ್ಲ, ಇದು ಪಕ್ಷ ಮತ್ತು ಸರ್ಕಾರಕ್ಕೆ ಹಾನಿ ಮಾಡಿದೆ ಎಂದು ಹೈಕಮಾಂಡ್ ಭಾವಿಸಿದೆ ಎಂದು ತಿಳಿದು ಬಂದಿದೆ.
CM met mallikarjun kharge
ಖರ್ಗೆ ಭೇಟಿಯಾದ ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಗೆ ತಮ್ಮ ಗಡಿ ದಾಟದಂತೆ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್ ಪಕ್ಷ ಮತ್ತು ಸರ್ಕಾರಕ್ಕೆ ಆಗುವ ಹಾನಿ ತಡೆಯಲು ಆಡಳಿತದತ್ತ ಗಮನ ಹರಿಸುವಂತೆ ಸೂಚಿಸಿದೆ.

ಪಕ್ಷವನ್ನು ಕೇಡರ್ ಆಧಾರಿತ ಘಟಕವನ್ನಾಗಿ ಪರಿವರ್ತಿಸುವ ಗುರಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಏಪ್ರಿಲ್ 8 ಮತ್ತು 9 ರಂದು ಅಹಮದಾಬಾದ್‌ನಲ್ಲಿ ಎಐಸಿಸಿ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ಮಹತ್ವದ್ದಾಗಿದೆ.

ದೆಹಲಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ, ಸಿಎಂ ಆಪ್ತ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿದೆ ಎಂಬ ಆರೋಪದ ಕುರಿತು ಹೈಕಮಾಂಡ್ ಮಾತುಕತೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಈ ವಿಷಯವನ್ನು ಸರಿಯಾಗಿ ನಿಭಾಯಿಸಲಿಲ್ಲ, ಇದು ಪಕ್ಷ ಮತ್ತು ಸರ್ಕಾರಕ್ಕೆ ಹಾನಿ ಮಾಡಿದೆ ಎಂದು ಹೈಕಮಾಂಡ್ ಭಾವಿಸಿದೆ ಎಂದು ತಿಳಿದು ಬಂದಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ದೆಹಲಿಯಲ್ಲಿ ಸಿದ್ದರಾಮಯ್ಯ ಜೊತೆ ಚರ್ಚಿಸುವ ವೇಳೆ ಹನಿಟ್ರ್ಯಾಪ್ ಪ್ರಕರಣವನ್ನು ಹೇಗೆ ನಿರ್ವಹಿಸಲಾಯಿತು ಎಂಬ ಬಗ್ಗೆ ಅಸಮಾದಾನ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಹುಲ್ ಗಾಂಧಿ ಅವರ ಫ್ರೈಡೇ ಮ್ಯಾನ್ ಎಂದೇ ಗುರುತಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಕರೆದು ಸಮಸ್ಯೆಯನ್ನು ಸೂಕ್ಷ್ಮ ವಾಗಿ ನಿಭಾಯಿಸುವಂತೆ ಹಾಗೂ ಆದಷ್ಟು ಶೀಘ್ರವೇ ಇತ್ಯರ್ಥಪಡಿಸುವಂತೆ ತಿಳಿಸಿಗೃದರು. ನಂತರ, ಪರಮೇಶ್ವರ ಪ್ರಕರಣದ ತನಿಖೆ ನಡೆಸುತ್ತಿರುವ ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ.

CM met mallikarjun kharge
ಹನಿಟ್ರ್ಯಾಪ್, ಸುಪಾರಿ ಡೀಲ್ ಪ್ರಕರಣಗಳ ತನಿಖೆ: ರಾಜಕೀಯ ಆಯಾಮದಲ್ಲಿ ರಹಸ್ಯ ಭೇದಿಸಲು ಪೊಲೀಸರ ಸಿದ್ಧತೆ

ಯಾವುದೇ ವಿಷಯವು ಬಿಜೆಪಿಯ ಕೈಗೆ ಸಿಗದಂತೆ ನೋಡಿಕೊಳ್ಳಲು ಆಡಳಿತದತ್ತ ಗಮನಹರಿಸುವಂತೆ ರಾಹುಲ್ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು. ಐದು ಭರವಸೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಅವರು ನಿರ್ದಿಷ್ಟವಾಗಿ ಹೇಳಿದ್ದರು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಫಲಾನುಭವಿಗಳ ಸಮ್ಮೇಳನಗಳನ್ನು ಆಯೋಜಿಸಲು ಅವರು ಸಿಎಂಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಹುಕೋಟಿ ಎಸ್‌ಟಿ ನಿಗಮ ಹಗರಣದ ಆರೋಪದ ಮೇಲೆ ರಾಜೀನಾಮೆ ನೀಡಿದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮರು ಸೇರ್ಪಡೆಗೊಳಿಸುವುದಕ್ಕೆ ರಾಹುಲ್ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ. ನಾಗೇಂದ್ರ ಅವರನ್ನು ಮತ್ತೆ ನೇಮಕ ಮಾಡಿಕೊಳ್ಳಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದರು ಎನ್ನಲಾಗಿತ್ತು.

ಸಿದ್ದರಾಮಯ್ಯ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವವರೆಗೆ ಶಿವಕುಮಾರ್ ಅವರು ಈ ಹುದ್ದೆಯಲ್ಲಿ ಮುಂದುವರಿಯಬೇಕೆಂದು ಖರ್ಗೆ ಹೇಳಿದರು. ಪಕ್ಷದ ಒಂದು ಭಾಗದ ಶಾಸಕರು ಶಿವಕುಮಾರ್ ಅವರ ಮುಂದುವರಿಕೆಯನ್ನು ವಿರೋಧಿಸುತ್ತಿದ್ದಾರೆ ಮತ್ತು ಸಿದ್ದರಾಮಯ್ಯ ಈ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ" ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದ ನಂತರ ಹೊಸ ಅಧ್ಯಕ್ಷರ ಹುಡುಕಾಟ ವೇಗ ಪಡೆಯುವ ಸಾಧ್ಯತೆಯಿದೆ. ಹೈದರಾಬಾದ್-ಕರ್ನಾಟಕ ಪ್ರದೇಶದ ವೀರಶೈವ ಲಿಂಗಾಯತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಂಚೂಣಿಯಲ್ಲಿ ಹೊರಹೊಮ್ಮಿದ್ದಾರೆ. ಬೀದರ್ ಸಂಸದರಾಗಿ ತಮ್ಮ 27 ವರ್ಷದ ಸಾಗರ್ ಖಂಡ್ರೆ ಅವರ ಗೆಲುವಿನಲ್ಲಿ ಅವರಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. ಹೈಕಮಾಂಡ್ ಬಯಸಿದರೆ, ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಅಕ್ಟೋಬರ್-ನವೆಂಬರ್ 2025 ರ ನಂತರ ಶಿವಕುಮಾರ್ ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com