ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯವಾಗಿದೆ, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್​ ದ್ವಿಮುಖ ನೀತಿ: HDK ವಾಗ್ದಾಳಿ

ಸಂಸತ್​ನಲ್ಲಿ ಕಾವೇರಿ ವಿಷಯ ಪ್ರಸ್ತಾಪ ಆದಾಗ ನಾನು ನೋಡುತ್ತಿದ್ದೇನೆ. ಆ ನದಿಯ ವಿಷಯ ಪ್ರಸ್ತಾಪವಾದರೆ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿಬಿಡುತ್ತಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ​ ದ್ವಿಮುಖ ನೀತಿ ತಳೆದ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ರಾಜ್ಯ ಬಹಳಷ್ಟು ಹಿಂದಕ್ಕೆ ಹೋಗಿದೆ. ಯಾವಾಗಲೂ ನಮ್ಮ ರಾಜ್ಯಕ್ಕಿಂತ ನೆರೆ ರಾಜ್ಯಕ್ಕೆ ಅನುಕೂಲ ಆಗುತ್ತಿದೆ. ಕನ್ನಡಿಗರಲ್ಲಿ ಒಗ್ಗಟ್ಟು ಇಲ್ಲ. ನೀರಿನ ವಿಷಯದಲ್ಲಿಯೂ ಅದೇ ಆಗುತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.

ತಮಿಳುನಾಡಿನ ಡಿಎಂಕೆ ಜತೆ ನಮ್ಮ ಸಂಬಂಧ ರಾಜಕೀಯಕ್ಕೆ ಮಾತ್ರ ಸೀಮಿತ. ಡಿಎಂಕೆ ಜತೆ ಮೇಕೆದಾಟು ವಿಷಯ ಮಾತನಾಡುವುದಕ್ಕೆ ರಾಜಕೀಯ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಇಲ್ಲಿ ನೋಡಿದರೆ ಮೇಕೆದಾಟು ಪಾದಯಾತ್ರೆ ಮಾಡಿ, ನಮ್ಮ ನೀರು ನಮ್ಮ ಹಕ್ಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕುಮಾರಸ್ವಾಮಿಗೆಲ್ಲಾ ಹೆದರುವ ಮಗ ನಾನಲ್ಲ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಡಿಕೆಶಿ ಕೌಂಟರ್‌

ನಮ್ಮಲ್ಲಿ ಒಗ್ಗಟ್ಟು ಬರದಿದ್ದರೆ ಕಾವೇರಿ ವಿಷಯದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನ ದಟ್ಟಣೆಯಿಂದ ಮುಂದೆ ಇಡೀ ಕನ್ನಂಬಾಡಿ ಕಟ್ಟೆಯ ನೀರೆಲ್ಲವನ್ನು ಕೊಟ್ಟರೂ ರಾಜಧಾನಿಗೆ ಕುಡಿಯುವ ನೀರು ಸಾಕಾಗದ ಪರಿಸ್ಥಿತಿ ಬರಬಹುದೇನೋ? ಮುಂದೆ ಈ ರೀತಿಯ ನೀರಿನ ಸಂಕಷ್ಟ ಬರುತ್ತದೆ ಎನ್ನುವ ದೂರದೃಷ್ಟಿಯಿಂದ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ನಾವು ಮುಂದಾಗಿದ್ದೇವೆ. ಮಂಡ್ಯದಲ್ಲಿ ಗೆಲ್ಲಿಸಿದರೆ ಐದು ನಿಮಿಷದಲ್ಲಿ ಯೋಜನೆಗೆ ಕೇಂದ್ರದ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಕೊಡಿಸಲಿ ಎಂದು ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ. ಅದಕ್ಕಿಂತ ಮೊದಲು ಅವರು ಮಾಡಬೇಕಾದ ಕೆಲಸ ಒಂದಿದೆ, ಅವರ ಮಿತ್ರ ಪಕ್ಷವೇ ಆಡಳಿತ ನಡೆಸುತ್ತಿರುವ ತಮಿಳುನಾಡಿನ ಒಪ್ಪಿಗೆ ಕೊಡಿಸಲಿ, ಆಮೇಲೆ ನಮ್ಮ ಬಗ್ಗೆ ಮಾತನಾಡಲಿ ಎಂದು ಹೇಳಿದರು.

ಸಂಸತ್​ನಲ್ಲಿ ಕಾವೇರಿ ವಿಷಯ ಪ್ರಸ್ತಾಪ ಆದಾಗ ನಾನು ನೋಡುತ್ತಿದ್ದೇನೆ. ಆ ನದಿಯ ವಿಷಯ ಪ್ರಸ್ತಾಪವಾದರೆ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿಬಿಡುತ್ತಾರೆ. ಆದರೆ, ನಮ್ಮಲ್ಲಿ ಏನಾಗುತ್ತಿದೆ? ಎಲ್ಲಕ್ಕೂ ರಾಜಕೀಯ ತರುತ್ತೇವೆ, ಜಾತಿ ತರುತ್ತೇವೆ. ಇದೇ ನಮಗೆ ಮುಳುವಾಗಿದೆ. ನೆಲ, ಜಲ, ಭಾಷೆಯ ವಿಷಯ ಬಂದಾಗ, ನಾವು ರಾಜಕೀಯ ಮತ್ತು ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು. ಇಲ್ಲದಿದ್ದರೆ, ನಮಗೆ ಎಂದಿಗೂ ನ್ಯಾಯ ಸಿಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ವಿ. ಗೋಪಾಲ ಗೌಡ, ಸಂಸದ ಡಾ. ಸಿ. ಎನ್. ಮಂಜುನಾಥ್, ಮಾಜಿ ಐಎಎಸ್ ಅಧಿಕಾರಿ ಟಿ. ತಿಮ್ಮೇಗೌಡ, ಮಾಜಿ ಎಂಎಲ್‌ಸಿ ಕೆ. ಎ. ತಿಪ್ಪೇಸ್ವಾಮಿ, ಕಾವೇರಿ ನದಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಎಚ್. ಕೆ. ರಾಮು ಮತ್ತು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಉಪಸ್ಥಿತರಿದ್ದರು

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನನ್ನನ್ನು ಕೆಣಕಬೇಡಿ, ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳಿವೆ: ಡಿಕೆಶಿಗೆ ಕುಮಾರಸ್ವಾಮಿ ಎಚ್ಚರಿಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com