ಅಹಮದಾಬಾದ್​ನಲ್ಲಿ AICC ಸಭೆ: ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಕುರಿತು ಚರ್ಚೆ- ಡಿ.ಕೆ ಶಿವಕುಮಾರ್

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಅಹಮದಾಬಾದ್​ನಲ್ಲಿ ನಡೆಯುವ ಎಐಸಿಸಿ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷದ ಎಲ್ಲಾ ಘಟಕಗಳ ಬಲವರ್ಥನೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಅಹಮದಾಬಾದ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಮಾರ್ಗಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಪಕ್ಷ ಸಂಘಟನೆಯ ವಿಚಾರದಲ್ಲಿ ಒಂದೊಂದೇ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರೂ ಚರ್ಚೆ ನಡೆಸಿ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಲವಾರು ವಿಚಾರಗಳು ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ ಮಾಡಲಾಗುವುದು. ಕಳೆದ ವಾರ ದೆಹಲಿಯಲ್ಲಿ ಜಿಲ್ಲಾ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿತ್ತು. 1924 ರಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ತೆಗೆದುಕೊಂಡು 100 ವರ್ಷಗಳು ಸಂದಿವೆ. ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟು ನಡೆದವರು ಎಂದರು.

ಡಿಕೆ.ಶಿವಕುಮಾರ್
ಬಿಜೆಪಿಯಿಂದ ಗಾಂಧಿ ಸಂಸ್ಥೆಗಳ ಸ್ವಾಧೀನ ಖಂಡಿಸಿದ ಖರ್ಗೆ, ಮಹಾನ್ ನಾಯಕರ ವಿರುದ್ಧದ ಪಿತೂರಿ ಎದುರಿಸುವುದಾಗಿ ಪ್ರತಿಜ್ಞೆ

ಕಾಂಗ್ರೆಸ್ಸಿನ ಗೆಲುವು ಗುಜರಾತಿನಿಂದ ಪ್ರಾರಂಭವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಹೌದು ಖಂಡಿತವಾಗಿಯೂ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚರಿಸುತ್ತೇನೆ ಎಂದರು.

ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾತನಾಡಿ, ಬಿಜೆಪಿಯವರ ಜನಾಕ್ರೋಶ ಯಾತ್ರೆಯನ್ನು ಸ್ವಾಗತಿಸುತ್ತೇನೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com