ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಕಾಂಗ್ರೆಸ್ ಶಾಸಕರೇ ತಮ್ಮ ಸರ್ಕಾರದ ಕರಾಳ ಮುಖವಾಡ ಬಿಚ್ಚಿಟ್ಟಿದ್ದಾರೆ- ವಿಜಯೇಂದ್ರ

ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರ, ಲೂಟಿಕೋರತನ ಕಾಂಗ್ರೆಸ್ ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ.
BY Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1 ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಕಾಂಗ್ರೆಸ್ ಶಾಸಕರೇ ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ. ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ರಾಜ್ಯ ನಿಮ್ಮ ಆಡಳಿತದಲ್ಲಿ ಸಂಪೂರ್ಣ ಭ್ರಷ್ಟತೆಯ ಕಪ್ಪುಮಸಿ ಮೆತ್ತಿಕೊಂಡಿರುವುದನ್ನು ಅನಾವರಣ ಮಾಡಿ ಕರ್ನಾಟಕ ವಿಶ್ವಮಟ್ಟದಲ್ಲಿ ತಲೆತಗ್ಗಿಸುವ ಪರಿಸ್ಥಿತಿ ಇರುವುದನ್ನು ವಿವರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಟಾಂಗ್ ನೀಡಿದ್ದಾರೆ.

ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರ, ಲೂಟಿಕೋರತನ ಕಾಂಗ್ರೆಸ್ ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ. ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ. ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ರಾಜ್ಯ ನಿಮ್ಮ ಆಡಳಿತದಲ್ಲಿ ಸಂಪೂರ್ಣ ಭ್ರಷ್ಟತೆಯ ಕಪ್ಪುಮಸಿ ಮೆತ್ತಿಕೊಂಡಿರುವುದನ್ನು ಅನಾವರಣ ಮಾಡಿ ಕರ್ನಾಟಕ ವಿಶ್ವಮಟ್ಟದಲ್ಲಿ ತಲೆತಗ್ಗಿಸುವ ಪರಿಸ್ಥಿತಿ ಇರುವುದನ್ನು ವಿವರಿಸಿದ್ದಾರೆಂದು ಹೇಳಿದ್ದಾರೆ.

ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆಯೇ ಅಧಿಕಾರಿಗಳೂ ಇರುತ್ತಾರೆ, ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರದ ಕುರಿತು ನನ್ನ ವೈಯಕ್ತಿಕ ಅಭಿಪ್ರಾಯ ಇದೇ ಇರುತ್ತದೆ ಎಂದು ಹೇಳುವ ಮೂಲಕ 'ಯಥಾ ರಾಜ ತಥಾ ಮಂತ್ರಿಗಳು, ಅಧಿಕಾರಿಗಳು ‘ಎಂಬ ಮಾತು ನಿಮ್ಮ ಆಡಳಿತದಲ್ಲಿ ಅಕ್ಷರಶಃ ಅನ್ವಯಿಸುತ್ತಿದೆ ಎನ್ನುವುದನ್ನು ಹೇಳುವ ಮೂಲಕ ವಾಸ್ತವ ಸ್ಥಿತಿಯ ಮೇಲೆ ನೇರವಾಗಿ ಬೆಳಕು ಚೆಲ್ಲಿದ್ದಾರೆಂದು ಟೀಕಿಸಿದ್ದಾರೆ.

ಹಿಂದಿನ ನಮ್ಮ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಶೇ.40 ಸರ್ಕಾರ ಎಂಬ ಸುಳ್ಳು ಅಪಪ್ರಚಾರಗಳನ್ನು ನಡೆಸಿ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸಿ ಜಗತ್ತಿನಲ್ಲಿ “ನಾವೇ ಸತ್ಯವಂತರು“ ಎಂದು ಡಂಗುರ ಸಾರಿ ಅಧಿಕಾರಕ್ಕೆ ಬಂದ ನಿಮ್ಮ ನೈಜ ಮುಖವಾಡ ಇದೀಗ ಕಳಚಿ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

BY Vijayendra
ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್‌ ಒನ್‌: ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ

ಭ್ರಷ್ಟತೆಯ ಕೆನ್ನಾಲಿಗೆ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರು ಹಾಗೂ ಕಡು ಬಡವರ ದೈನಂದಿನ ಬದುಕಿನ ಸ್ಥಿತಿಯನ್ನು ಸುಡುತ್ತಿದೆ. ಇದಕ್ಕಾಗಿ ನಿಮ್ಮ ಸರ್ಕಾರದ ವಿರುದ್ಧ ಜನಬೆಂಬಲಿತ ‘ಬಿಜೆಪಿ ಜನಾಕ್ರೋಶದ ಹೋರಾಟದ ಯಾತ್ರೆ’ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸದೇ ಕರುನಾಡಿಗೆ ಮುಕ್ತಿಯಿಲ್ಲ ಎಂಬ ನಿರ್ಧಾರಕ್ಕೆ ರಾಜ್ಯದ ಜನ ಬಂದಿದ್ದಾರೆ. ಸದ್ಯದಲ್ಲೇ ಜನಾಕ್ರೋಶದ ಬಿಸಿ ನಿಮ್ಮ ಸರ್ಕಾರವನ್ನು ಸುಟ್ಟು ಪಥನಗೊಳಿಸಲಿದೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com