ಪಕ್ಷದ ಹಲವಾರು ನಾಯಕರು KPCC ಹುದ್ದೆ ರೇಸ್ ನಲ್ಲಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಕೆಪಿಸಿಸಿ ಉನ್ನತ ಹುದ್ದೆಗೆ ನಾನೂ ಸೇರಿದಂತೆ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಬೆಲೆ ಏರಿಕೆ ಕುರಿತು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗಲೂ ವಿವಿಧ ವಸ್ತುಗಳ ಬೆಲೆಗಳು ಏರಿದ್ದವು. ಆದರೆ, ಇದೀಗ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

ಇದೇ ವೇಳೆ ಹಾಲಿನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಅವರು, ರೈತರಿಗೆ ಲಾಭ ಮಾಡುವ ಸಲುವಾಗಿ ಸರ್ಕಾರ ದರ ಏರಿಕೆ ಮಾಡಿದೆ. ವಿದ್ಯುತ್ ದರ ಏರಿಕೆಯ ಬಗ್ಗೆ ವಿದ್ಯುತ್ ನಿಯಂತ್ರಣ ಪ್ರಾಧಿಕಾರವು ನಿರ್ಧಾರ ತೆಗೆದುಕೊಳ್ಳಲಿದ್ದು, ಪ್ರತಿ ಎರಡು ಮೂರು ವರ್ಷಗಳಿಗೊಮ್ಮೆ ದರ ಏರಿಕೆ ಮಾಡುತ್ತದೆ ಎಂದು ಹೇಳಿದರು.

ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವಿದ್ಯುತ್ ದರಗಳ ಹೆಚ್ಚಳವು ನಿಯಂತ್ರಣ ಪ್ರಾಧಿಕಾರದ ಶಿಫಾರಸುಗಳ ಆಧಾರದ ಮೇಲೆ ಯಾವಾಗಲೂ ಸಂಭವಿಸಿದೆ. ಇತ್ತೀಚೆಗೆ, ಮೆಟ್ರೋ ಟಿಕೆಟ್ ಬೆಲೆಗಳನ್ನು ಸಹ ಹೆಚ್ಚಿಸಲಾಗಿದೆ. ಬಿಜೆಪಿ ಈ ವಿಷಯಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು

ಸತೀಶ್ ಜಾರಕಿಹೊಳಿ
KPCC ಅಧ್ಯಕ್ಷರ ಆಯ್ಕೆ ಮಾನದಂಡಗಳ ಬಗ್ಗೆ ನನಗೆ ತಿಳಿದಿಲ್ಲ; ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿಲ್ಲ: ಸತೀಶ್ ಜಾರಕಿಹೊಳಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com