'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ': ಹೋರಾಟಕ್ಕೆ ಜನತಾ ದಳ ಸಜ್ಜು; ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ

ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಜನಕ್ರೋಶ ಅಭಿಯಾನ ನಡೆಸುತ್ತಿರುವ ವೇಳೆಯೇ, ಅದರ ಮಿತ್ರ ಪಕ್ಷ ಜೆಡಿಎಸ್ ಬುಧವಾರ 'ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ' (ಸಾಕಾದರೆ ಸಾಕು ಕಾಂಗ್ರೆಸ್ ಸರ್ಕಾರ) ಅಭಿಯಾನ ಆರಂಭಿಸಿದೆ.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ ಸಂಚಲನ ಸೃಷ್ಟಿಸಿದೆ. ಈ ಅಭಿಯಾನದ ಬಗ್ಗೆ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, https://www.saakappasaaku.com ಎಂಬ ನೂತನ ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದರು.

ಈ ವೆಬ್ ತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಆರ್ಥಿಕವಾಗಿ ರಾಜ್ಯವನ್ನು ವಿಕೋಪದ ಪರಿಸ್ಥಿತಿಗೆ ದೂಡಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ನಾಡಿನ ಜನರನ್ನು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ.

ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ. ನಾವು ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು’ ಎಂಬ ಅಭಿಯಾನ ಶುರು ಮಾಡಿದ್ದೇವೆ ಎಂದು ಅವರು ತಿಳಿಸಿದರು. ಜೆಡಿಎಸ್ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

Nikhil Kumaraswamy
ಕಾಂಗ್ರೆಸ್ ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ಅಡ್ಡಿ, ಕೆಲಸ ಮಾಡಲು ಬಿಡುತ್ತಿಲ್ಲ: ಕುಮಾರಸ್ವಾಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com