ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಪರ-BJP ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ: ವಿಜಯೇಂದ್ರ ಆರೋಪ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಅವರ ಮೇಲೆ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.
BY Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಪರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯನ್ನಾಗಿಸಿಕೊಂಡು ಪೊಲೀಸ್ ದೌರ್ಜನ್ಯಗಳು ಪುನರಾವರ್ತನೆ ಯಾಗುತ್ತಲೇಯಿದೆ. ಸುಳ್ಳು ದೂರುಗಳನ್ನು ದಾಖಲಿಸಿಕೊಂಡು ಕಾರ್ಯಕರ್ತರ ವಿರುದ್ಧ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಆರೋಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಅವರ ಮೇಲೆ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಪರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯನ್ನಾಗಿಸಿಕೊಂಡು ಪೊಲೀಸ್ ದೌರ್ಜನ್ಯಗಳು ಪುನರಾವರ್ತನೆ ಯಾಗುತ್ತಲೇಯಿದೆ. ಸುಳ್ಳು ದೂರುಗಳನ್ನು ದಾಖಲಿಸಿಕೊಂಡು ಕಾರ್ಯಕರ್ತರ ವಿರುದ್ಧ ನಿರಂತರ ಕಿರುಕುಳ ನೀಡಲಾಗುತ್ತಿದೆ.

ಕೊಡಗಿನ ವಿನಯ್ ಸೋಮಯ್ಯ ಪ್ರಕರಣ ಹಸಿಯಾಗಿರುವಾಗಲೇ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸ್ವತಃ ಜಿಲ್ಲಾ ಎಸ್.ಪಿಯೇ ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಅವರ ಮೇಲೆ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ, ಅಧಿಕಾರ ದುರ್ಬಳಕೆ ಹಾಗೂ ಪೊಲೀಸ್ ದಬ್ಬಾಳಿಕೆಯನ್ನು ಸಾಕ್ಷೀಕರಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ರಾತ್ರಿ ಇಡೀ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿವೆ.

BY Vijayendra
ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಕಾಂಗ್ರೆಸ್ ಶಾಸಕರೇ ತಮ್ಮ ಸರ್ಕಾರದ ಕರಾಳ ಮುಖವಾಡ ಬಿಚ್ಚಿಟ್ಟಿದ್ದಾರೆ- ವಿಜಯೇಂದ್ರ

ಇಷ್ಟಾಗಿಯೂ ಹಿಂದೂ ಕಾರ್ಯಕರ್ತರ ಮೇಲೆ ಪ್ರಲಾಪ ತೋರಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಜರುಗಿಸದೇ ಮೌನ ವಹಿಸಿರುವುದು ಅತ್ಯಂತ ಖಂಡನೀಯ ನಡೆ. ಕಾಂಗ್ರೆಸ್ ಸರ್ಕಾರದ ಈ ಧೋರಣೆ ಹಾಗೂ ವರ್ತನೆಯನ್ನು ಇನ್ನುಮುಂದೆ ಸಹಿಸಿ ಕೂರಲಾಗದು. ಸದ್ಯ ಮುಂದುವರೆದಿರುವ ಜನಾಕ್ರೋಶ ಯಾತ್ರೆಯಲ್ಲಿ ಈ ಬಗ್ಗೆ ದನಿಯೆತ್ತಲಾಗುವುದು ಎಂದು ತಿಳಿಸಿದ್ದಾರೆ.

ಆರೋಪ ನಿರಾಕರಣೆ

ಈ ನಡುವೆ ಯಾವುದೇ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳುವ ಮೂಲಕ ಉತ್ತರ ಕನ್ನಡ ಎಸ್ಪಿ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ.

ಯಾವುದೇ ಕೋಮು ಘಟನೆ ನಡೆದಿಲ್ಲ ಅಥವಾ ಯಾವುದೇ ಹಿಂದೂ ಕಾರ್ಯಕರ್ತರ ಬಂಧನವಾಗಿಲ್ಲ. ಒಬ್ಬ ರೌಡಿ ಶೀಟರ್ ಅನ್ನು ಬಂಧಿಸಿದ್ದೇನೆ. ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಈ ಬಗ್ಗೆ ತನಿಖೆ ಮಾಡಲು ಬಯಸಿದರೆ, ಮಾಡಲಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com