ಗುತ್ತಿಗೆದಾರರು ಲೋಕಾಯುಕ್ತರನ್ನು ಸಂಪರ್ಕಿಸಬೇಕು; HDK ದಾಖಲೆ ಸಾಗಿಸಲು ಯಾವಾಗ ಲಾರಿ ಕಳುಹಿಸಬೇಕು?: ಡಿಕೆಶಿ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೊದಲ ಅವಧಿಯಲ್ಲಿ ಎಂಟು ಕಂಪನಿಗಳ ಗಣಿಗಾರಿಕೆ ಗುತ್ತಿಗೆ ನವೀಕರಣಕ್ಕಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಶಿವಕುಮಾರ್ ಹೇಳಿದರು.
Dk Shivakumar And HD kumaraswamy
ಡಿ ಕೆ ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಕೆಲವು ಪದಾಧಿಕಾರಿಗಳು ಮತ್ತು ಹಲವು ಕಾಂಗ್ರೆಸ್‌ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಹೊರತುಪಡಿಸಿ ಕೆಪಿಸಿಸಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅಂತಹ ಯಾವುದೇ ಪ್ರಸ್ತಾವವಾಗಲಿ ಅಥವಾ ಚರ್ಚೆ ಆಗಲಿ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಅಂತಹ ಪ್ರಸ್ತಾವವೂ ಇಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಆರೋಪಿಸಿದ್ದಾರಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನು ಕೂಡ ಟಿವಿಯಲ್ಲಿ ನೋಡಿದೆ ಅಷ್ಟೇ. ಅವರು ಈ ಹೇಳಿಕೆ ನೀಡಿದ ಮರುದಿನವೇ ಅದನ್ನು ವಾಪಸ್‌ ಪಡೆದಿದ್ದಾರೆ. ಅದೇನೇ ಇದ್ದರೂ ಅವರನ್ನು ಕರೆದು ಚರ್ಚಿಸುತ್ತೇನೆ’ ಎಂದರು.

ನಾನು ಯಾವಾಗಲೂ ಪಕ್ಷದ ಕಾರ್ಯಕರ್ತರ ಪರವಾಗಿ ನಿಲ್ಲುತ್ತೇನೆ. ಪಕ್ಷಕ್ಕಾಗಿ ಕೆಲಸ ಮಾಡುವವರ ಪರವಾಗಿ ನಾನು ಯಾವಾಗಲೂ ನಿಲ್ಲುತ್ತೇನೆ" ಎಂದು ಅವರು ಹೇಳಿದರು, ನಾಮನಿರ್ದೇಶನದಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ಸುಳಿವು ನೀಡಿದರು. ಎಂಎಲ್‌ಸಿಗಳ ನಾಮನಿರ್ದೇಶನದ ಬಗ್ಗೆ ಸಿಎಂ ಮತ್ತು ಡಿಸಿಎಂ ನಡುವೆ ಒಮ್ಮತವಿಲ್ಲ ಎಂಬ ವದಂತಿ ಮಾಧ್ಯಮದ ಒಂದು ಭಾಗದ ಸೃಷ್ಟಿಯಾಗಿದೆ" ಎಂದು ಅವರು ಹೇಳಿದರು.

ಗುತ್ತಿಗೆದಾರರು ಲೋಕಾಯುಕ್ತರನ್ನು ಸಂಪರ್ಕಿಸಲಿ:

ಕೆಲವು ಸಚಿವರು ಬಿಲ್‌ಗಳ ಪಾವತಿಯನ್ನು ವಿಳಂಬ ಮಾಡುತ್ತಿದ್ದಾರೆ ಮತ್ತು ಸಚಿವರು ಎನ್‌ಒಸಿಗಾಗಿ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು ಲೋಕಾಯುಕ್ತ ಮತ್ತು ಸರ್ಕಾರಕ್ಕೆ ದೂರು ನೀಡಲಿ. ನಮ್ಮ ಸರ್ಕಾರ ನ್ಯಾಯ ಒದಗಿಸುತ್ತದೆ. ನಾವು ಯಾವುದೇ ಲಂಚವನ್ನು ಪ್ರೋತ್ಸಾಹಿಸುವುದಿಲ್ಲ. ಅವರು ನನ್ನ ಇಲಾಖೆಯನ್ನು ಉಲ್ಲೇಖಿಸಿರಬಹುದು. ಅವರು ಎಲ್ಲಾ ಇಲಾಖೆಗಳ ಬಗ್ಗೆ ದೂರು ನೀಡಿರಬಹುದು. ಗುತ್ತಿಗೆದಾರರು ಲಿಖಿತ ದೂರು ನೀಡಲಿ ಮತ್ತು ನಾವು ತನಿಖೆ ನಡೆಸುತ್ತೇವೆ. ನಾವು ಅವರ ಬಿಲ್‌ಗಳಿಗೆ 10-20 ಪ್ರತಿಶತ ಅನುದಾನವನ್ನು ಬಿಡುಗಡೆ ಮಾಡಿದ್ದೇವೆ" ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೊದಲ ಅವಧಿಯಲ್ಲಿ ಎಂಟು ಕಂಪನಿಗಳ ಗಣಿಗಾರಿಕೆ ಗುತ್ತಿಗೆ ನವೀಕರಣಕ್ಕಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಶಿವಕುಮಾರ್ ಹೇಳಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ "ಟನ್‌ಗಟ್ಟಲೆ ದಾಖಲೆಗಳನ್ನು" ಬಿಡುಗಡೆ ಮಾಡುವುದಾಗಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, "ನಾನು ಅವರಿಗೆ ಯಶಸ್ಸನ್ನು ಬಯಸುತ್ತೇನೆ. ಅಲ್ಲದೆ, ದಾಖಲೆಗಳನ್ನು ಸಾಗಿಸಲು ನಾನು ಯಾವಾಗ ಲಾರಿಯನ್ನು ಕಳುಹಿಸಬೇಕು?" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com