ಕಾಂಗ್ರೆಸ್ ಹಿಂದೂ ವಿರೋಧಿಯಷ್ಟೇ ಅಲ್ಲ, ದಲಿತ ವಿರೋಧಿಯೂ ಹೌದು: ಪ್ರಹ್ಲಾದ್ ಜೋಶಿ

ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ
Updated on

ಬೆಂಗಳೂರು: ಕಾಂಗ್ರೆಸ್ ಕೇವಲ ಹಿಂದೂ ವಿರೋಧಿಯಷ್ಟೇ ಅಲ್ಲ, ದಲಿತ ವಿರೋಧಿ ಕೂಡ ಹೌದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

`ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ಹಾಗೂ ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು.

ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆಂದು ತಿಳಿಸಿದರು.

ಪ್ರಹ್ಲಾದ್ ಜೋಶಿ
6 ತಿಂಗಳ ಬಳಿಕ ರಾಜ್ಯ ಸರ್ಕಾರಕ್ಕೆ ಜ್ಞಾನೋದಯವಾಗಿದೆ: ಪ್ರಹ್ಲಾದ್ ಜೋಶಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com