ನಮ್ಮ ಮನೆಗಾಗಲಿ, ನಮ್ಮ ತಾತ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ: ನಿಖಿಲ್
ಬೆಂಗಳೂರು: ಜಾತಿಗಣತಿ ಎನ್ನುವುದು ಕ್ರಮಬದ್ಧವಾಗಿ, ವೈಜ್ಞಾನಿಕವಾಗಿ ನಡೆದಿಲ್ಲ. ನಮ್ಮ ಮನೆಗಾಗಲಿ, ನಮ್ಮ ಅಜ್ಜ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲನೆಯದಾಗಿ ವರದಿಯಲ್ಲಿ ಏನಿದೆ ಎನ್ನುವುದನ್ನು ಬಹಿರಂಗಪಡಿಸಬೇಕು. ಆದಾದ ನಂತರ ನಾವು ಯಾವ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬ ತೀರ್ಮಾನ ಮಾಡುತ್ತೇವೆ.
ಒಂದಂತೂ ಸತ್ಯ, ಈ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ನಮ್ಮ ಮನೆಗಾಗಲಿ, ನಮ್ಮ ಅಜ್ಜ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ ಎಂದರು.
ರಾಜಕೀಯ ಸಂಕಷ್ಟ ಕಾಲ ಬಂದಾಗ ಕೆಲವರಿಗೆ ಇಂಥ ವಿಚಾರಗಳು ನೆನಪಿಗೆ ಬರುತ್ತವೆ. ಐದು ವರ್ಷ ಮುಖ್ಯಮಂತ್ರಿ, ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಆಗಿದೆ. ಹಣಕಾಸು ಸಚಿವರು, ಉಪ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಇಷ್ಟೆಲ್ಲಾ ಆಗಿದ್ದರು ಅವರಿಗೆ ಅಹಿಂದ ಜನರನ್ನು ಉದ್ಧಾರ ಮಾಡುವುದು ಸಾಧ್ಯ ಆಗಿಲ್ಲ. ರಾಜಕೀಯ ಗಿಮಿಕ್ ಮಾಡಿಕೊಂಡು ತಿರುಗಾಡುತ್ತಿದ್ದಾರೆ ಎಂದು ಅವರು ದೂರಿದರು.
ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೊರಟ್ಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ನಿಖಿಲ್ ಅವರು ಮನವಿ ಮಾಡಿದರು.
ಕಳೆದ ಚುನಾವಣೆಯಲ್ಲಿ ಇದೇ ಕಾಂಗ್ರೆಸ್ಸಿಗರು ಅಂದು ಇದ್ದಂತ ಸರ್ಕಾರದ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿದ್ದರು. 40% ಕಮಿಷನ್ ಆರೋಪ ಮಾಡಿದ್ದರು. ನಮಗೊಂದು ಅವಕಾಶ ಕೊಡಿ ನಾವು ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಎಂದು ಹೇಳಿದ್ದರು. ಅಂತ ಹೇಈಗ ಭ್ರಷ್ಟಾಚಾರ ಅನ್ನುವುದು ಯಾವ ಹಂತಕ್ಕೆ ತಲುಪಿದೆ ಎಂದರೆ ಪರ್ಸೆಂಟೇಜ್ ಅನ್ನುವುದಕ್ಕೆ ಲಿಮಿಟೆಷನ್ ಇಲ್ಲ, ಲಿಮಿಟೆಷನ್ ಮೀರಿ ಹೋಗಿದೆ ಎಂದು ಅವರು ಆರೋಪಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ