ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ

ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.
ಆರ್. ಅಶೋಕ್
ಆರ್. ಅಶೋಕ್
Updated on

ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ್ದು, 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದೆ.

ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

ಸ್ಪೀಕರ್ ಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ(ಎಲ್‌ಒಪಿ) ಆರ್. ಅಶೋಕ್ ಅವರು, “ನಾವು ಸ್ಪೀಕರ್ ಅವರನ್ನು ಭೇಟಿ ಮಾಡಿ ನಮ್ಮ ಮನವಿ ಸಲ್ಲಿಸಿದ್ದೇವೆ. ಶಾಸಕರು ಕಮಿಟಿ ಸಭೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿರುವುದು ನ್ಯಾಯಯುತ ಕ್ರಮವಲ್ಲ” ಎಂದರು.

ಆರ್. ಅಶೋಕ್
18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿ: ಸ್ಪೀಕರ್'ಗೆ ಸುರೇಶ್ ಕುಮಾರ್ ಮನವಿ

“ಹಿಂದೆ ನೂರಾರು ಇದೇ ರೀತಿಯ ಘಟನೆಗಳು ನಡೆದಿವೆ. ಬಿಜೆಪಿ, ಸ್ಪೀಕರ್ ಗೆ ಅವಮಾನಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಸಿಡಿ ವಿಷಯದ ಬಗ್ಗೆ ನಾವು ಒಂದು ಪಕ್ಷವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪ್ರತಿಭಟನೆಯು ಪಕ್ಷದ ನಿಲುವು ಮತ್ತು ಸ್ಪೀಕರ್ ವಿರುದ್ಧ ಹೋಗುವ ಯಾವುದೇ ಉದ್ದೇಶ ಇರಲಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಅಶೋಕ್ ಹೇಳಿದರು.

ಸ್ಪೀಕರ್ ನಮ್ಮ ಮನವಿಗೆ ಗೌರವಯುತವಾಗಿ ಪ್ರತಿಕ್ರಿಯಿಸಿದರು ಮತ್ತು ಈ ವಿಷಯವನ್ನು ಪರಿಶೀಲಿಸುವುದಾಗಿ ಹಾಗೂ ಕಾನೂನು ಸಚಿವರೊಂದಿಗೆ ಚರ್ಚಿಸಿದ ನಂತರ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದರು ಎಂದರು.

ವಿಧಾನಸಭಾ ಅಧಿವೇಶನವು ಸುಗಮವಾಗಿ ನಡೆಯಬೇಕೆಂದು ಸ್ಪೀಕರ್ ಬಯಸುವುದಾಗಿ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರದೊಂದಿಗೆ ಸಮಾಲೋಚಿಸುವುದಾಗಿ ಹೇಳಿದರು. “ಅವರ ಪ್ರತಿಕ್ರಿಯೆ ಸಕಾರಾತ್ಮಕವಾಗಿತ್ತು” ಎಂದು ಅಶೋಕ್ ತಿಳಿಸಿದರು.

ಇನ್ನು ಕರ್ನಾಟಕದ ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್, "ಕರ್ನಾಟಕದಲ್ಲಿ ಕೊಲೆಗಳು ಮತ್ತು ಅತ್ಯಾಚಾರಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಈಗ ಪೊಲೀಸ್ ಅಧಿಕಾರಿಗಳೂ ಸುರಕ್ಷಿತವಾಗಿಲ್ಲ. ಕೊಲೆಗೆ ಕಾರಣ ಏನೇ ಇರಲಿ, ಘಟನೆ ರಾಷ್ಟ್ರೀಯ ಸುದ್ದಿಗಳಲ್ಲಿ ಸ್ಥಾನ ಪಡೆದಿದೆ" ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com