ಬಿಜೆಪಿಯಿಂದ ರಾಜ್ಯಪಾಲರ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ

ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.
ಬಿಜೆಪಿಯಿಂದ ರಾಜ್ಯಪಾಲರ ಭೇಟಿ
ಬಿಜೆಪಿಯಿಂದ ರಾಜ್ಯಪಾಲರ ಭೇಟಿ
Updated on

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ.

ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.

ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯದ ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭೆಯ ಸ್ಪೀಕರ್ ಗೆ ನಿರ್ದೇಶಿಸುವಂತೆ ನಾವು ಅತ್ಯಂತ ಗೌರವದಿಂದ ಬೇಡಿಕೊಳ್ಳುತ್ತೇವೆ" ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿಯಿಂದ ರಾಜ್ಯಪಾಲರ ಭೇಟಿ
ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ

ಅಮಾನತು ಆದೇಶ ರದ್ದು ಮಾಡುವಂತೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬಿಜೆಪಿ ಶಾಸಕರು ಪತ್ರದ ಮೂಲಕ ಹಾಗೂ ಭೇಟಿಯಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗಿದೆ.

ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com