ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ; ವದಂತಿಗಳಿಗೆ ಬಿಜೆಪಿಯೇ ಕಾರಣ: ಪ್ರಿಯಾಂಕ್ ಖರ್ಗೆ!

ಕೇಂದ್ರ ಮಟ್ಟದಲ್ಲಾಗಲಿ ಅಥವಾ ರಾಜ್ಯ ಮಟ್ಟದಲ್ಲಾಗಲಿ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವಿಲ್ಲ.
Priyank Kharge
ಪ್ರಿಯಾಂಕ್ ಖರ್ಗೆ
Updated on

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ. ಬಿಕ್ಕಟ್ಟಿಗೆ ಸಿಲುಕಿರುವ ರಾಜ್ಯ ಬಿಜೆಪಿ ತನ್ನ ನ್ಯೂನತೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಮಟ್ಟದಲ್ಲಾಗಲಿ ಅಥವಾ ರಾಜ್ಯ ಮಟ್ಟದಲ್ಲಾಗಲಿ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಪಪಡಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಕರ್ಗೆ, ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಹೇಳುತ್ತಿರುವಾಗ, ಇಂತಹ ವಿಚಾರಗಳು ಎಲ್ಲಿಂದ ಬರುತ್ತೋ ಗೊತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ವರಿಷ್ಟರು ಈ ವಿಷಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದಾರೆ. ಹಾಗಾಗಿ ಬಿಜೆಪಿ ಮಾತನಾಡಬೇಕಾದ ಈ ಪ್ರಶ್ನೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ ಎಂದರು.

ನಾಯಕತ್ವ ಬದಲಾವಣೆಯ ಊಹಾಪೋಹಗಳ ಮೂಲದ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಪ್ರತಿಪಕ್ಷ ಬಿಜೆಪಿ ತಮ್ಮ ದೌರ್ಬಲ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಛಿದ್ರ ಛಿದ್ರವಾಗಿರುವ ಪಕ್ಷವಾಗಿದೆ. ಅವರಲ್ಲಿ ನಾಯಕರೇ ಇಲ್ಲ. ಬಿಜೆಪಿಯಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ.ಅದು ಸದನದಲ್ಲಿಯೂ ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ಹೇಳಿದರು.

Priyank Kharge
ಆಡಳಿತದಲ್ಲಿ ಸುರ್ಜೇವಾಲಾ ಹಸ್ತಕ್ಷೇಪ ಮಾಡುತ್ತಿಲ್ಲ, ಬಿಜೆಪಿ-ಜೆಡಿಎಸ್ ಆರೋಪ ಸತ್ಯಕ್ಕೆ ದೂರ: ಡಾ. ಜಿ. ಪರಮೇಶ್ವರ್

ಯಾವುದಾದರೊಂದು ವಿಷಯದ ಬಗ್ಗೆ ನಿಲುವು ತೆಗೆದುಕೊಳ್ಳುವಾಗ ಬಿಜೆಪಿಯ ಅರ್ಧದಷ್ಟು ಶಾಸಕರು ವಿಧಾನಸಭೆಯಿಂದ ಹೊರನಡೆದರೆ ಉಳಿದವರು ಸದನದ ಬಾವಿಗೆ ಇಳಿಯುತ್ತಾರೆ. ಹಾಗಾಗಿ ಅವರಲ್ಲಿ ನಾಯಕತ್ವದ ಸಮಸ್ಯೆಗಳಿವೆ.

ಬಿಜೆಪಿಯಲ್ಲಿ ಬಿಕ್ಕಟ್ಟು ಇದೆ. ಪ್ರತಿ ಎರಡು ದಿನಗಳಿಗೊಮ್ಮೆ ವಿಜಯೇಂದ್ರ ಹಾಗೂ ಆರ್.ಅಶೋಕ್ ನಾವೇ ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತೇವೆ ಎಂದು ಹೇಳುತ್ತಿರುತ್ತಾರೆ. ಆದ್ದರಿಂದ ಅವರ ನ್ಯೂನತೆ, ದೌರ್ಬಲ್ಯ, ಅನೈತಿಕತೆಯನ್ನು ಮರೆಮಾಡಲು ಇಂತಹ ಪಿತೂರಿ ನಡೆಸುತ್ತಲೇ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com