ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ; ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ: HDK

ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ಧೂರ್ತ ಹುನ್ನಾರ.
Union Minister HD Kumaraswamy
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Updated on

ನವದೆಹಲಿ: ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಮತಗಳ್ಳತನವಾಗಿದೆ ಎಂದು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ ಪಟ್ಟಿರುವುದು ಕಿಡಿಗೇಡಿ ಪಿತೂರಿಯಾಗಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಂದುವರೆದು, ಮತಗಳ್ಳತನ ಆರೋಪಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡುವ ಮೂಲಕ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

Union Minister HD Kumaraswamy
SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com