
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ "ಮತ ಕಳ್ಳತನ"ವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಶುಕ್ರವಾರ ಹೇಳಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ರ್ಯಾಲಿಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾಡಿರುವ ಮತ ಕಳ್ಳತನ ಆರೋಪ ನಿಜವಾಗಿದೆ. ನಾವು ಎಂಟು ವಿಧಾನಸಭಾ ಸ್ಥಾನಗಳಲ್ಲಿ ಏಳರಲ್ಲಿ ಮುನ್ನಡೆ ಸಾಧಿಸಿದ್ದೇವೆ, ಆದರೆ ಮಹದೇವಪುರದಲ್ಲಿ ಹಿಂದುಳಿದಿದ್ದೇವೆ, ಇದು ಫಲಿತಾಂಶಗಳನ್ನು ನಮ್ಮ ವಿರುದ್ಧ ತಿರುಗಿಸಿತು. ಬಿಜೆಪಿ ಮತ್ತು ಆರ್‌ಎಸ್‌ಎಸ್ ಇಂತಹ ಅಕ್ರಮಗಳಿಗೆ ಹೆಸರುವಾಸಿಯಾಗಿದೆ ಎಂದು ಟೀಕಿಸಿದರು.
2024 ರ ಕರ್ನಾಟಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ "ಚುನಾವಣಾ ಅಕ್ರಮ"ಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ಅಕ್ರಮಗಳನ್ನು ತಪ್ಪಿಸುವ ಬಗ್ಗೆ ನಾವು ಹೆಚ್ಚು ಜಾಗರೂಕರಾಗಿರಬೇಕಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
Advertisement