
ಬೆಂಗಳೂರು: ಸಾಮೂಹಿಕ ಸಮಾಧಿ ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17 ರಂದು ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯ ಪಟ್ಟಣ ಧರ್ಮಸ್ಥಳಕ್ಕೆ ನಮ್ಮ ಶಾಸಕರು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಬುಧವಾರ ಘೋಷಿಸಿದೆ.
ಮಂಜುನಾಥಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಗೆ ಪೂಜೆ ಸಲ್ಲಿಸುವುದು ಮಾತ್ರ ನಮ್ಮ ಉದ್ದೇಶ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಮುಂದಿನ ಭಾನುವಾರ ಆಗಸ್ಟ್ 17 ರಂದು, ನಮ್ಮ ಎಲ್ಲಾ ಹಿರಿಯ ಶಾಸಕರು ಮತ್ತು ಎಂಎಲ್‌ಸಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಾವು ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತೇವೆ ಎಂದು ವಿಜಯೇಂದ್ರ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭೇಟಿಯ ಹಿಂದಿನ ಕಾರಣದ ಬಗ್ಗೆ ಕೇಳಿದಾಗ, ನಾವು ಅಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ನಾವು ಅಲ್ಲಿಗೆ ಬಿಜೆಪಿ ನಾಯಕರಾಗಿ ಅಲ್ಲ, ಬದಲಾಗಿ ಮಂಜುನಾಥ ಸ್ವಾಮಿಯ ಭಕ್ತರಾಗಿ ಹೋಗುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಧರ್ಮಸ್ಥಳ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ "ಸತ್ಯ ಹೊರಬರಬೇಕು ಮತ್ತು ಗೊಂದಲ ಶೀಘ್ರದಲ್ಲೇ ಕೊನೆಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ಎಸ್‌ಡಿಪಿಐನಂತಹ ಸಮಾಜವಿರೋಧಿ ಶಕ್ತಿಗಳು ತನಿಖೆಯ ಹಿಂದೆ ಕೈವಾಡವಿದೆ ಎಂಬ ಗುಸುಗುಸು ಕೇಳಿಬರುತ್ತಿವೆ ಎಂದಿದ್ದಾರೆ.
Advertisement