RCB ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆ ಖಂಡಿಸಿ ಟ್ವೀಟ್ ಮಾಡಿದ್ದು ಬಿಜೆಪಿಯಲ್ಲವೇ?: ಅಶೋಕ್ ಗೆ ಡಿ.ಕೆ.ಶಿ ತಿರುಗೇಟು

ತೆರೆದ ಬಸ್ ನಲ್ಲಿ ಆಟಗಾರರ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸುವ ಮೂಲಕ ಆಕಸ್ಮಿಕ ಗೃಹ ಸಚಿವ ಪರಮೇಶ್ವರ್ ತಾವೊಬ್ಬ ಅಸಮರ್ಥ ಹಾಗೂ ಅದಕ್ಷ ಎಂಬುದನ್ನು ಸಾಬೀತುಪಡಿಸಿದ್ದಾರೆ.
DK Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು ನಿಮ್ಮದೇ ಪಕ್ಷವಲ್ಲವೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಅವರಿಗೆ ತಿರುಗೇಟು ನೀಡಿದರು.

ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ ಛೇಡಿಸಿದರು.

ಆರ್ ಸಿಬಿ ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿದೆಯೇ ಹೊರತು ಅವರಿಂದ ಯಾವುದೇ ಉತ್ತಮ ಕೆಲಸವಾಗಿಲ್ಲ. ಸರ್ಕಾರ ಜನರ ಸಂಭ್ರಮಾಚರಣೆ ವೇಳೆ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿ ಈ ಕಾರ್ಯಕ್ರಮ ಆಯೋಜಿಸಿತು. ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಈ ಕಾಲ್ತುಳಿತ ಪ್ರಕರಣ ಸಂಭವಿಸಿದ್ದು, ಇದಕ್ಕೆ ಸರ್ಕಾರವೇ ಹೊಣೆ ಎಂದು ಆರ್. ಅಶೋಕ್ ಆರೋಪ ಮಾಡಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಅವರು, ಅಭಿಮಾನಿಗಳ ವಿಜಯೋತ್ಸವದ ವೇಳೆ ಮೆರವಣಿಗೆಗೆ ಸರ್ಕಾರ ನಿರಾಕರಿಸಿದಾಗ ಬಿಜೆಪಿ ವತಿಯಿಂದ ಬಂದ ಟ್ವೀಟ್ ಬಗ್ಗೆಯೂ ಮಾತನಾಡಿ. ಅದನ್ನು ಯಾಕೆ ಹಾಗೇ ಬಿಡುತ್ತೀರಿ? ಹಲವಾರು ವರ್ಷಗಳ ಅಭಿಮಾನಿಗಳ ಕನಸನ್ನು ಆರ್ ಸಿಬಿ ಈ ವರ್ಷ ನನಸು ಮಾಡಿದೆ. ಆದರೆ ತೆರೆದ ಬಸ್ ನಲ್ಲಿ ಆಟಗಾರರ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸುವ ಮೂಲಕ ಆಕಸ್ಮಿಕ ಗೃಹ ಸಚಿವ ಪರಮೇಶ್ವರ್ ಅವರು ತಾವೊಬ್ಬ ಅಸಮರ್ಥ ಹಾಗೂ ಅದಕ್ಷ ಎಂಬುದನ್ನು ಸಾಬೀತುಪಡಿಸಿದ್ದಾರೆ.

ತಮ್ಮ ನೆಚ್ಚಿನ ಆಟಗಾರರನ್ನು ಅತಿ ಹತ್ತಿರದಿಂದ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಕಲ್ಲು ಹಾಕಿದ ಪರಮೇಶ್ವರ್’ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು. ಆ ಬಗ್ಗೆಯೂ ನೀವು ಹೇಳಬೇಕಲ್ಲವೇ” ಎಂದು ಕಾಲೆಳೆದರು.

DK Shivakumar
ಬೆಂಗಳೂರು ಕಾಲ್ತುಳಿತ: DC-DCM ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು; BJP ಆಗ್ರಹ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com