'ರಾಜಣ್ಣ ವಜಾ' ಪಕ್ಷದ ಆಂತರಿಕ ವಿಚಾರ; ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ನೀವು ಉತ್ತರ ಕೊಟ್ಟಿದ್ದೀರಾ?

‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ?
Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದು ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಇಂದು ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ಸರಕಾರದಿಂದ ಸೂಕ್ತ ಉತ್ತರ ಬಂದಿಲ್ಲ.

ರಾಜಣ್ಣನ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನು ತುಳಿಯಲಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

Siddaramaiah
KN ರಾಜಣ್ಣ ಭೇಟಿಯಾದ ಕಾಂಗ್ರೆಸ್ ಸಚಿವರು-ಶಾಸಕರು: ಪಕ್ಷ ಸೇರಲು ಬಿಜೆಪಿ ನಾಯಕರ ಆಹ್ವಾನ

ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ? ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದಾಗ ನೀವು ಉತ್ತರ ಕೊಟ್ಟಿದ್ದೀರಾ? ಇದು ಪಕ್ಷದ ಆಂತರಿಕ ವಿಚಾರ’ ಎಂದು ತಿರುಗೇಟು ನೀಡಿದರು.

ಈ ವೇಳೆ ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಈ ವಿಷಯದ ಬಗ್ಗೆ ಸಭಾ ನಾಯಕರು ಉತ್ತರಿಸಿದ್ದಾರೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ’ ಎಂದು ರೂಲಿಂಗ್ ನೀಡಿ ಗದ್ದಲಕ್ಕೆ ಕೊನೆ ಹಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com