'RSS ಭಾರತೀಯ ತಾಲಿಬಾನ್‌ಗಳು; ದೇಶ ವಿಭಜನೆಗೆ ನಿರ್ಣಯ ಮಂಡಿಸಿದ್ದು BJPಯ ಶ್ಯಾಮ ಪ್ರಸಾದ್ ಮುಖರ್ಜಿ!'

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ 'ಸಂಘಿ' ಇದ್ದರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ.
BK Hariprasad
ಬಿ.ಕೆ ಹರಿಪ್ರಸಾದ್
Updated on

ನವದೆಹಲಿ: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌ ಇದ್ದಂತೆ ಎಂದು ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಶನಿವಾರ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಮಾತ್ರ ಹೋಲಿಸುತ್ತೇನೆ, ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ" ಎಂದು ಹರಿಪ್ರಸಾದ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

"ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ 'ಸಂಘಿ' ಇದ್ದರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ. ಅವರಿಗೆ ಎಲ್ಲಿಂದ ಹಣ ಬರುತ್ತದೆ ಎಂದು ನಮಗೆ ತಿಳಿದಿಲ್ಲ. ದೇಶದಲ್ಲಿ ಕೆಲಸ ಮಾಡಲು ಬಯಸುವ ಯಾವುದೇ ಎನ್‌ಜಿಒ ಸಂವಿಧಾನದ ಪ್ರಕಾರ ನೋಂದಾಯಿಸಿಕೊಳ್ಳಬೇಕು" ಎಂದು ವಿಧಾನಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ.

ಮುಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಆಗಿನ ವೈಸ್‌ರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ದೇಶ ವಿಭಜನೆಗೆ ಕಾರಣ ಎಂದು ಎನ್‌ಸಿಇಆರ್‌ಟಿ ಪಠ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಇತಿಹಾಸವನ್ನು ತಿರುಚುವ ಮಾಸ್ಟರ್ಸ್ ಎಂದು ತಿರುಗೇಟು ನೀಡಿದರು.

BK Hariprasad
ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ RSS ನ 100 ವರ್ಷಗಳ ಸಾಧನೆ ಸ್ಮರಿಸಿದ ಪ್ರಧಾನಿ ಮೋದಿ!

ಅವರು ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ವಿಭಜನೆಗೆ ಮೊದಲ ನಿರ್ಣಯವನ್ನು ಮಂಡಿಸಿದವರು ಬ್ರಿಟಿಷ್ ಆಳ್ವಿಕೆಯಲ್ಲಿ ಬಂಗಾಳದ ಪ್ರಧಾನಿಯಾಗಿದ್ದ ಎಕೆ ಫಜ್ಲುಲ್ ಹಕ್ ಮತ್ತು ಜನ ಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಇದರಲ್ಲಿ ಭಾಗಿಯಾಗಿದ್ದರು ಎಂದು ಹೇಳಿದ್ದಾರೆ.

"ಬಿಜೆಪಿ ಮತ್ತು ಆರ್‌ಎಸ್‌ಎಸ್ ಇತಿಹಾಸವನ್ನು ತಿರುಚುವಲ್ಲಿ ನಿಪುಣರು, ಮತ್ತು ಅವರು ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುತ್ತಿದ್ದಾರೆ. ಬಂಗಾಳದಲ್ಲಿ ವಿಭಜನೆಗಾಗಿ ಮೊದಲ ನಿರ್ಣಯವನ್ನು ಮಂಡಿಸಿದವರು ಫಜ್ಲುಲ್ ಹಕ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ.

ಜಿನ್ನಾ ಮತ್ತು ಸಾವರ್ಕರ್ ಎರಡೂ ಧರ್ಮಗಳಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಅವರು ಅದಕ್ಕೆ ಕಾಂಗ್ರೆಸ್ ಅನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com