
ಬೆಂಗಳೂರು: ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ 'ಆರ್‌ಎಸ್‌ಎಸ್' ಗೀತೆ ಹಾಡಿರುವುದು ವ್ಯಾಪಕ ಚರ್ಚೆ ಹಾಗೂ ಅಚ್ಚರಿಗೆ ಕಾರಣವಾಗಿದೆ.
ವಿಧಾನಸಭೆ ಕಲಾಪದ ವೇಳೆ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ.ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಈ ಕುರಿತು ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆ ಶಿವಕುಮಾರ್ 'ಮಹಾನ್ ಕಲಾವಿದ' ಎಂದಿದ್ದಾರೆ.
ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆ ಮಾತನಾಡುವುದರಲ್ಲಿ ಅವರು ಎಕ್ಸ ಪರ್ಟ್ ಆಗಿದ್ದಾರೆ. ಇದನ್ನು ಅವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿದೆ. ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ಆದರೆ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.
Advertisement