V. somanna
ವಿ. ಸೋಮಣ್ಣ

ದೇವರೇ ಬಂದು ಹೇಳಿದರೂ ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ: ವಿ ಸೋಮಣ್ಣ

ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ವಿ.ಸೋಮಣ್ಣ, ಮತ್ತೆ ಚುನಾವಣೆಗೆ ನಿಂತ್ಕೊ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳಿದರು.
Published on

ತುಮಕೂರು: ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ.

ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ವಿ.ಸೋಮಣ್ಣ, ಮತ್ತೆ ಚುನಾವಣೆಗೆ ನಿಂತ್ಕೊ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ವಿವರಿಸಿದ ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದೀನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೇನೆ ಎಂದರು.

ಇನ್ನೊಂದು ಐವತ್ತು ವರ್ಷಕ್ಕೆ ತೊಂದರೆ ಆಗಬಾರದು. ನಾನು ಇನ್ನು ಐವತ್ತು ವರ್ಷ ಇರ್ತೀನೇನಪ್ಪಾ ಎಂದು ಸುದ್ದಿಗೋಷ್ಠಿ ಮಧ್ಯೆಯೇ ತಮಾಷೆ ಮಾಡಿದರು. ಇಂತಹ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮ ರಾಜಕೀಯ ಜೀವನದಲ್ಲಿ ಹೆಜ್ಜೆ ಗುರುತು ಎಂದು ತಿಳಿಸಿದರು.

ಕರ್ನಾಟಕ ರತ್ನ, ತ್ರಿವಿಧ ದಾಸೋಹಿಗಳು, ಶ್ರೇಷ್ಠ ಸಂತರು ಹಾಗೂ ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯರಾದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ರಾಜ್ಯದ ಗೃಹ ಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com