
ಬೆಂಗಳೂರು: ಬೆಂಗಳೂರು ಕೇಂದ್ರ ಕ್ಷೇತ್ರದ ಮಹದೇವಪುರದಲ್ಲಿ ಮತ ಕಳ್ಳತನ ನಡೆದಿರುವುದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಚುನಾವಣೆಯಲ್ಲಿ ಪರಾಜಯಗೊಂಡ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಷ್ಟೇ ಅಲ್ಲ, ಹಲವೆಡೆ ನಡೆದಿದೆ. ತಮ್ಮ ಮತದಾನದ ಹಕ್ಕನ್ನು ಗೌರವಿಸುವ ಪ್ರತಿಯೊಬ್ಬ ಭಾರತೀಯನಿಗೂ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.
ಒಬ್ಬ ವ್ಯಕ್ತಿಯ ಪ್ರಚಾರ ಅಥವಾ ಒಬ್ಬ ಅಭ್ಯರ್ಥಿಯ ಬಗ್ಗೆ ನಾನು ಮಾತನಾಡುತ್ತಿಲ್ಲ. ಧ್ವನಿಗಳನ್ನು ಅಳಿಸಿಹಾಕುವ ವ್ಯವಸ್ಥೆಯ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ದೇಶಕ್ಕೆ ಇಂದು ರೀತಿಯ ಪರೀಕ್ಷೆಯ ಪ್ರಕರಣವಾಗಿದೆ. ಈಗಲಾದರೂ ನಾವು ಕಾರ್ಯಪ್ರವೃತ್ತರಾಗದಿದ್ದರೆ, ಎಲ್ಲೆಡೆ ಈ ವಿಷ ಪಸರುತ್ತದೆ ಎಂದು ತಿಳಿಸಿದರು.
ಮನ್ಸೂರ್ ಅಲಿ ಖಾನ್ ಅವರು ಈ ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ #VoteChori ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ಶುರುವಾಯಿತು. ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಮನ್ಸೂರ್ ಅಲಿ ಖಾನ್ ಅವರು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.
Advertisement