ಧರ್ಮಸ್ಥಳ ವಿಚಾರದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ YouTuberಗಳ ವಿರುದ್ಧವೇಕೆ ಕ್ರಮವಿಲ್ಲ: ವಿಜಯೇಂದ್ರ ಪ್ರಶ್ನೆ

ಧರ್ಮಸ್ಥಳ ಪ್ರಕರಣದಲ್ಲಿ, ಕೆಲವರು ಇಡೀ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಆದರೆ, ಸರ್ಕಾರ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು.
BY Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಧರ್ಮಸ್ಥಳ ವಿಷಯದ ಬಗ್ಗೆ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ ಹರಡುತ್ತಿದ್ದರೂ, ರಾಜ್ಯ ಸರ್ಕಾರ ಅವರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಿಸಿಲ್ಲವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಕಾರ್ಯಕರ್ತರಾಗಿದ್ದರೆ ಸರ್ಕಾರ ಪ್ರಕರಣ ದಾಖಲಿಸಿ 24 ಗಂಟೆಗಳ ಒಳಗೆ ಅವರನ್ನು ಬಂಧಿಸುತ್ತಿತ್ತು. ಸರ್ಕಾರ ಸಮುದಾಯಗಳ ನಡುವೆ ಏಕೆ ತಾರತಮ್ಯ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ, ಕೆಲವರು ಇಡೀ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಆದರೆ, ಸರ್ಕಾರ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು. ಇದರ ಹಿಂದಿರುವ ಜನರು ಯಾರು, ಈ ಪಿತೂರಿಗೆ ಯಾರು ಹಣ ನೀಡಿದ್ದಾರೆ, ತಪ್ಪು ಮಾಹಿತಿ ಹರಡುತ್ತಿರುವವರು ಯಾರು, ಇದನ್ನು ತನಿಖೆ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಹಿಂದೂಗಳ ಭಾವನೆಗೆ, ಪರಂಪರೆಗೆ ಧಕ್ಕೆ ತರುವ ಯಾವುದೇ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬಾರದು ಎಂದು ಹೇಳಿದ ಅವರು, ಧರ್ಮಸ್ಥಳದ ಷಡ್ಯಂತ್ರದ ಹಿಂದಿನ ಕುತಂತ್ರ ಬಯಲಿಗೆ ಎಳೆಯಲು ಎನ್ಐಎ ಅಥವಾ ಸಿಬಿಐಗೆ ಕೇಸನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

BY Vijayendra
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ 'ಧರ್ಮಯುದ್ಧ': ಬಿ.ವೈ ವಿಜಯೇಂದ್ರ

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಒತ್ತಿ ಮಾತನಾಡಿ, ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಬೇಕಿತ್ತು. ಆದರೆ, ಮತ್ತೊಬ್ಬ ಸಮುದಾಯದ ನಾಯಕನ ವಿರೋಧದ ನಂತರ, ಸುಹಾಸ್ ಮನೆಗೆ ಭೇಟಿ ನೀಡದೆ ವಾಪಸ್ಸಾಗಿದ್ದಾರೆ. ಈ ಮೂಲಕ ಪ್ರತಿಯೊಂದು ಸಮಯದಲ್ಲೂ ರಾಜ್ಯ ಸರ್ಕಾರ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮಾತನಾಡಿ, ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಎಸ್ಐಟಿ ಸುಮಾರು 5 ಕೋಟಿ ರೂ. ಖರ್ಚು ಮಾಡಿದೆ. ನಾವು ನಮ್ಮ ಧರ್ಮವನ್ನು ರಕ್ಷಿಸುತ್ತೇವೆ, ಸೆಪ್ಟೆಂಬರ್ 1 ರಂದು ಧರ್ಮಸ್ಥಳದಲ್ಲಿ ಹೋರಾಟ ನಡೆಸುತ್ತಿದ್ದೇವೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com