ನೀನು ಬರೆಯುತ್ತಿದ್ದಲ್ಲ 'ಬೆತ್ತಲೆ ಪ್ರಪಂಚ'ಕ್ಕೆ ಬೂಕರ್ ಬಂತಾ? ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ: ವಿಶ್ವನಾಥ್ ವಾಗ್ದಾಳಿ

ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಆಳ್ವಿಕೆ ನಡೆಸುತ್ತಿದ್ದಾಗ ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದಾಗ ದಸರಾವನ್ನು ಆಚರಿಸಲಾಗುತ್ತಿತ್ತು. 2017 ರಲ್ಲಿ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು.
Banu Mushtaq, pratap simha and vishwanath
ಬಾನು ಮುಷ್ತಾಕ್, ಪ್ರತಾಪ್ ಸಿಂಹ ಮತ್ತು ವಿಶ್ವನಾಥ್
Updated on

ಮೈಸೂರು: ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸಂಬಂಧ ಕರ್ನಾಟಕ ಸರ್ಕಾರದ ನಿರ್ಧಾರ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಮೈಸೂರಿನಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ, ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದಾಗ ದಸರಾವನ್ನು ಆಚರಿಸಲಾಗುತ್ತಿತ್ತು. 2017 ರಲ್ಲಿ ಖ್ಯಾತ ಬರಹಗಾರ ಮತ್ತು ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು. ಹಾಗಾದರೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರೆ ವಿವಾದವೇನು?" ಎಂದು ಪ್ರಶ್ನಿಸಿದ್ದಾರೆ.

ಮಾಜಿ ರಾಜ್ಯಸಭಾ ಸದಸ್ಯ ಮತ್ತು ಪ್ರಸಿದ್ಧ ಲೇಖಕ ಎಲ್ ಹನುಮಂತಯ್ಯ ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ಇದು ಸಮಾಜಕ್ಕೆ ಹಾನಿಕಾರಕ ಎಂದಿದ್ದಾರೆ. ಮುಷ್ತಾಕ್‌ಗೆ ಬೆಂಬಲ ವ್ಯಕ್ತಪಡಿಸಿದ ಅವರು, "ಬಾನು ಮುಷ್ತಾಕ್ ನಮ್ಮ ಭೂಮಿಗೆ ಗೌರವ ತಂದಿದೆ. ಕೆಲವರು ದಸರಾ ಆಹ್ವಾನದ ಬಗ್ಗೆ ಅನಗತ್ಯ ವಿವಾದವನ್ನು ಹುಟ್ಟುಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ" ಎಂದು ಹೇಳಿದರು.

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವಿಗೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ವಾಗತಿಸಿದರು. ಬಾನು ಮುಷ್ತಾಕ್ ಕೃತಿಯನ್ನು ಇಂಗ್ಲಿಷ್ ಗೆ ಭಾಷಾಂತರ ಮಾಡಿದ ದೀಪಾ ಬಸ್ತಿ ಅವರಿಗೂ ಬೂಕರ್ ಪ್ರಶಸ್ತಿ ನೀಡಲಾಗಿದೆ. ಇಬ್ಬರಿಗೂ ಸಮಾನವಾಗಿ ಬೂಕರ್ ಪ್ರಶಸ್ತಿ ನೀಡಲಾಗಿದೆ ಎಂದರು.

Banu Mushtaq, pratap simha and vishwanath
ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ; ನಮ್ಮ ದಸರಾ ಖಾಸಗಿಯಾಗಿ ನಡೆಯುತ್ತೆ: ಪ್ರಮೋದಾ ದೇವಿ

ಬೂಕರ್ ಬಾನು ಮುಷ್ತಾಕ್ ಅವರಿಗೆ ಬಂದಿದೆ. ಪ್ರತಾಪಿಯಾಗಿ ಮಾತನಾಡುವ ಪ್ರತಾಪ್ ಸಿಂಹ ನೀನು ಬರೆಯುತ್ತಿದ್ದಲ್ಲ ಬೆತ್ತಲೆ ಪ್ರಪಂಚಕ್ಕೆ ಬೂಕರ್ ಬಂತಾ. ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ. ನಿನ್ನ ಪ್ರತಾಪಕ್ಕೆ ಬಿಜೆಪಿ ಹೈಕಮಾಂಡ್ ಸೀಟೇ ಇಲ್ಲದ ಹಾಗೆ ಮಾಡಿದರು ಎಂದು ಮಾಜಿ ಸಂಸದ ಪ್ರತಾಪ್ ಅವರ ವಿರುದ್ಧ ಹರಿಹಾಯ್ದರು. ಮಂತ್ರಿಗಳಾಗಿದ್ದವರೂ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

ಶೋಭಾ ಕರಂದ್ಲಾಜೆ ಭಾರತ ಸರಕಾರದ ಮಂತ್ರಿ. ಇವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತಲು ಬಿಡುವುದಿಲ್ಲ ಎಂದು ಹೇಳುತ್ತಾರೆ. ಚಾಮುಂಡಿ ಬೆಟ್ಟವನ್ನು ನಿಮಗೆ ಯಾರು ಬರೆದುಕೊಟ್ಟವರು? ಹೀಗೆ ಹೇಳಲು ಅಧಿಕಾರ ಕೊಟ್ಟವರು ಯಾರು? ಇದು ಜನರ ಪ್ರಭುತ್ವ, ಜಾತಿ-ಪಂಥದ ಶರಾ ಬರೆದಿಲ್ಲ. ಇದು ಎಲ್ಲರ ದಸರಾ ಎಂದು ಹೇಳಿದರು‌.

ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ರಾಜಕಾರಣಿಗಳು ಏನು ಬೇಕಾದರೂ ಹೇಳಿಕೊಳ್ಳಲಿ, ಅವರು ಹೇಳಿದ ಕೂಡಲೇ ಎಲ್ಲವೂ ಆಗುವುದಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದರು. ಯದುವಂಶದ ಮನೆ ದೇವರು, ಕುಲದೇವಿ ಚಾಮುಂಡಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಪೂಜೆ ನಡೆಯುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com