

ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ . ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನು ಆಡಿದ್ದಾರೆ.
ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್? ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು.
ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಅಚ್ಚರಿ ಮಾತುಗಳನ್ನು ಆಡಿದ್ದಾರೆ. ಈ ಒಂದು ಸಣ್ಣ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಹಾಸನ ಜಿಲ್ಲೆಯ ಹಳೇಬೀಡು ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗೆ ಡಿಕೆಶಿ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಭೇಟಿ, ಅಧಿಕಾರ ಹಂಚಿಕೆ ಯುದ್ಧ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಎಲ್ಲದರ ನಡುವೆಯೂ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮಾತೇ ಅಂತಿಮ ಎಂದು ಹೇಳುತ್ತಿದ್ದಾರೆ. ಇದೀಗ ಮತ್ತೆ ಅಚ್ಚರಿ ಹೇಳಿಕೆ ಕೊಟ್ಟ ಸಿಎಮ ಏನ್ ಆಗುತ್ತೋ ಆಗಲಿ, ನಾನು ತಲೆ ಕಡೆಸಿಕೊಳ್ಳುವುದಿಲ್ಲ, ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ದೆಹಲಿಯಲ್ಲಿಯೂ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು. ಆದರೆ ಸಿಎಂ ಅವರ ಈ ಮಾತುಗಳು ಸಚಿವ ಸ್ಥಾನ ಖಾತರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನೇ ನೀಡಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
Advertisement