

ಬೆಂಗಳೂರು: ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಟಿಕೋಳಿ ಸಾರು ಸವಿದಿದ್ದರ ಕುರಿತು ಬಿಜೆಪಿ ಕಿಡಿಕಾರಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹರ ಸಭೆ ಮಾಡಿದ್ದಾರೆಂದು ಹೇಳಿದ್ದಾರೆ.
ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲ ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಹಾರ ನಡೆದಿದ್ದಾರೆ. ಈಗ ಡಿಕೆ.ಶಿವಕುಮಾರ್ ಮನೆಯಲ್ಲಿ ನಡೆದಿದೆ.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲಾ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದರು.
ಬಿಜೆಪಿ ನಾಯಕ ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿ, ಹನುಮ ಜಯಂತಿ ಯಂದು ನಾಟಿ ಕೋಳಿ ಸಾರು ಬ್ರೇಕ್ ಫಾಸ್ಟ್. ಈ ಮೀಟಿಂಗ್ ನಲ್ಲಿ ವಿಶೇಷ ಎಂದರೆ ಅತಿಥಿಗಳು ಮಾಂಸಾಹಾರ ಸೇವನೆಗೆ ಸಿದ್ದರಿದ್ದು, ಆಹ್ವಾನಿತರು ಸಸ್ಯಹಾರಿಗಳಾಗಿರುವುದು. ರಾಜ್ಯದ ನಾಗರಿಕರಿಗೆ ಪುಕ್ಕಟೆ ಮನರಂಜನೆ ಮುಂದುವರಿಯುವುದು.. ಖಚಿತ ಎಂದು ಟೀಕಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸಿಎಂ ಮತ್ತು ಡಿವೈಸಿಎಂ ನಡುವಿನ ಉಪಾಹಾರ ಸಭೆ ಕೇವಲ ಟೀಸರ್ ಆಗಿದ್ದು, ನಿಜವಾದ ಚಿತ್ರ ಇನ್ನೂ ಹೊರಬರಬೇಕಿದೆ ಎಂದು ಹೇಳಿದರು.
ಜೆಡಿಎಶ್ ಪ್ರತಿಕ್ರಿಯಿಸಿ, ಬ್ರೇಕ್ ಫಾಸ್ಟ್ ಟೂರ್ ನಿಲ್ಲಿಸಿ, ಆಡಳಿದತ್ತ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ ಒತ್ತಾಯಿಸಿದೆ.
ಅಧಿಕಾರಕ್ಕೆ ಬಂದರೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸುಳ್ಳು ಭರವಸೆ ಕೊಟ್ಟಿದ್ದ ಕಾಂಗ್ರೆಸ್, ಅದನ್ನು ಮರೆತು ಈಗ ಉದ್ಯೋಗ ಆಕಾಂಕ್ಷಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದೆ. ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಅವರಿಗೆ ಕುರ್ಚಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲು ಸಿಕ್ಕಾಪಟ್ಟೆ ಸಮಯವಿದೆ. ನೌಕರಿಗಾಗಿ ಬೀದಿಯಲ್ಲಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳ ಸಮಸ್ಯೆ, ಅಹವಾಲು ಆಲಿಸಲು ಟೈಂ ಇಲ್ಲದಿರುವುದು ನಾಚಿಕೆಗೇಡು ಎಂದು ಕಿಡಿಕಾರಿದೆ.
Advertisement